ಕೆ. ಶಿವರಾಮ್ ನೋಡಲು ಆಸ್ಪತ್ರೆಗೆ ಬಂದ ಮಾಜಿ ಸಿಎಂ ಯಡಿಯೂರಪ್ಪ

Updated on: Feb 29, 2024 | 11:27 AM

ಕೆ ಶಿವರಾಮ್​ಗೆ ಹೃದಯಾಘಾತವಾಗಿದೆ. ಇದರ ಜೊತೆಗೆ ಅವರ ಮಿದುಳು ಕೂಡ ಕೆಲಸ ಮಾಡುತ್ತಿಲ್ಲ ಎನ್ನಲಾಗಿದೆ. ಅವರನ್ನು ಸದ್ಯ ಬೆಂಗಳೂರಿನ ಎಚ್​ಸಿಜಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅವರು ಐಸಿಯುನಲ್ಲಿ ಇದ್ದಾರೆ. ಶಿವರಾಮ್ ಅವರನ್ನು ನೋಡಲು ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಆಸ್ಪತ್ರೆಗೆ ಬಂದಿದ್ದರು.

ಕನ್ನಡದ ನಟ ಕೆ ಶಿವರಾಮ್ (K Shivaram) ಅವರಿಗೆ ಹೃದಯಾಘಾತವಾಗಿದೆ. ಇದರ ಜೊತೆಗೆ ಅವರ ಮಿದುಳು ಕೂಡ ಕೆಲಸ ಮಾಡುತ್ತಿಲ್ಲ ಎನ್ನಲಾಗಿದೆ. ಅವರನ್ನು ಸದ್ಯ ಬೆಂಗಳೂರಿನ ಎಚ್​ಸಿಜಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅವರು ಐಸಿಯುನಲ್ಲಿ ಇದ್ದಾರೆ. ಶಿವರಾಮ್ ಅವರನ್ನು ನೋಡಲು ಇಂದು (ಫೆಬ್ರವರಿ 29) ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಆಸ್ಪತ್ರೆಗೆ ಬಂದಿದ್ದರು. ಶಿವರಾಮ್ ಪರಿಸ್ಥಿತಿ ನೋಡಿ ಯಡಿಯೂರಪ್ಪ ಅವರು ಮರುಗಿದ್ದಾರೆ. ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಇನ್ನೂ ಹಲವು ಕನ್ನಡ ಚಿತ್ರಗಳಲ್ಲಿ ಶಿವರಾಮ್ ಅವರು ನಟಿಸಿದ್ದಾರೆ. ಶಿವರಾಮ್ ಅವರು ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು ಅನ್ನೋದು ವಿಶೇಷ. ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More