ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಉಡುಪಿಯ ಕಾರ್ಕಳ ತಾಲೂಕಿನ ಸಾಣೂರು ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ರಮಾನಾಥ ರೈ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಮಾಜಿ ಸಚಿವರ ಕಾರು ಚಾಲಕನಿಗೆ ಗಂಭೀರ ಗಾಯವಾಗಿದ್ದು, ರಮಾನಾಥ ರೈ ಮತ್ತು ಚಾಲಕನಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಉಡುಪಿ, ಸೆಪ್ಟೆಂಬರ್ 20: ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ರಮಾನಾಥ ರೈ ಕಾರು ಅಪಘಾತವಾಗಿದ್ದು, ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬಸ್ಸು ಮೂಡುಬಿದಿರೆ ಕಡೆಗೆ ತೆರಳುತ್ತಿದ್ದರೆ, ಮಾಜಿ ಸಚಿವರ ಕಾರು ಕಾರ್ಕಳದತ್ತ ಬರುತ್ತಿತ್ತು ಎನ್ನಲಾಗಿದೆ. ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದ್ದು, ರಮಾನಾಥ ರೈ ಮತ್ತು ಚಾಲಕನಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 20, 2026 04:41 PM
Loading...
Unable to load recommendations.
Follow Us
