Umashree at CM’s residence: ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಮಾಜಿ ಸಚಿವೆ-ನಟಿ ಉಮಾಶ್ರೀ

ಅರುಣ್​ ಕುಮಾರ್​ ಬೆಳ್ಳಿ

Updated on: Jun 09, 2023 | 12:16 PM

ವಯಸ್ಸು 66 ಆದರೂ ಉಮಾಶ್ರೀ ಇನ್ನೂ ಗಟ್ಟಿಮುಟ್ಟಾಗಿದ್ದಾರೆ, ಮುಖದಲ್ಲಿ ಮೊದಲಿನ ಕಳೆ ಈಗಲೂ ಉಳಿದಿದೆ.

ಬೆಂಗಳೂರು: ರಂಗಭೂಮಿ ಕಲಾವಿದೆ, ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ತಾರೆ, ಮಾಜಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಹಿರಿಯ ಕಾಂಗ್ರೆಸ್ ಕಾರ್ಯಕರ್ತೆ ಉಮಾಶ್ರೀ ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಲು ಅವರ ಅಧಿಕೃತ ನಿವಾಸಕ್ಕೆ ಆಗಮಿಸಿದರು. ವಯಸ್ಸು 66 ಆದರೂ ಉಮಾಶ್ರೀ ಇನ್ನೂ ಗಟ್ಟಿಮುಟ್ಟಾಗಿದ್ದಾರೆ ಮುಖದಲ್ಲಿ ಮೊದಲಿನ ಕಳೆ ಈಗಲೂ ಉಳಿದಿದೆ. ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ ಬಳಿಕ ಹಿರಿಯ ನಟಿ ಫೋನಲ್ಲಿ ಮಾತಾಡುತ್ತಾ ಹೊರಬರುವುದನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.