ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಮಾಜಿ ಸಚಿವ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ

Edited By:

Updated on: Dec 21, 2025 | 11:27 AM

ಮಾಜಿ ಸಚಿವ ಕೆ.ಎನ್​. ರಾಜಣ್ಣ ಅವರು ಡಿ.ಕೆ. ಶಿವಕುಮಾರ್ ಭೇಟಿ ಕುರಿತು ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಯಾರನ್ನಾದರೂ ಭೇಟಿ ಮಾಡಬಹುದು. ಅದರಲ್ಲಿ ಯಾವುದೇ ರಾಜಕೀಯವಿಲ್ಲ, ಪಕ್ಷ ಸಂಘಟನೆ ಕುರಿತು ಚರ್ಚಿಸಲಾಯಿತು ಎಂದು ರಾಜಣ್ಣ ತಿಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಬೆಂಗಳೂರು, ಡಿಸೆಂಬರ್​ 21: ಶನಿವಾರದಂದು ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ಮಾಜಿ ಸಚಿವ ಕೆ.ಎನ್​​ ರಾಜಣ್ಣ ಭೇಟಿ ಮಾಡಿದ್ದರು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್ ಪಾರ್ಟಿ ಅಧ್ಯಕ್ಷರಾಗಿ ಭೇಟಿ ಮಾಡಿದ್ದರು. ಯಾರಿಗೆ ಬೇಕಾದರೂ ಭೇಟಿ ಮಾಡಬಹುದು, ಯಾರನ್ನಾದರೂ ಕರೆದು ಮಾತನಾಡಬಹುದು. ಪಕ್ಷದ ಹಿತದೃಷ್ಟಿಯಿಂದ ಏನೆಲ್ಲಾ ಮಾಡಬೇಕು ಅನಿಸುತ್ತೆ ಅವರು ಮಾಡುತ್ತಾರೆ. ಇದರಲ್ಲಿ ಯಾವುದೇ ಪ್ರಮುಖ ವಿಚಾರ ಇಲ್ಲ. ನಾವು ಯಾವಾಗಲೂ ಸಿದ್ದರಾಮಯ್ಯ ಪರವಾಗಿ ಇದ್ದೇವೆ. ಡಿಕೆ ಶಿವಕುಮಾರ್ ಏನೇ ಪ್ರಯತ್ನ ‌ಮಾಡಿದರು ಕೂಡ ನನ್ನ ಹಿಂದಿನ ಎಲ್ಲ ಹೇಳಿಕೆಳಿಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More