ವಿದ್ಯುತ್ ಬಿಲ್ ಪಾವತಿಸಬೇಡಿ​, ಬಸ್​ ಟಿಕೆಟ್​ ತೆಗೆದುಕೊಳ್ಳಬೇಡಿ ಎಂದು ಮಹಿಳಾ ಜಾಗೃತಿಗೆ ಮುಂದಾದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ

| Updated By: Digi Tech Desk

Updated on: Jun 01, 2023 | 11:59 AM

ಚುನಾವಣೆಯಲ್ಲಿ ಸೋಲು ಅನುಭವಿಸಿದ ಎಂ.ಪಿ.ರೇಣುಕಾಚಾರ್ಯ ಅವರು ಇದೀಗ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಬಸ್ಸಿನಲ್ಲಿ ಟಿಕೆಟ್ ತೆಗೆದು ಕೊಳ್ಳಬೇಡಿ, ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಮನೆ ಮನೆಗೆ ತೆರಳಿ ಮಹಿಳೆಯರಿಗೆ ಮನವರಿಕೆ ಮಾಡುತ್ತಿದ್ದಾರೆ.

ದಾವಣಗೆರೆ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ (M P Renukacharya) ಮಹಿಳಾ ಜಾಗೃತಿಗೆ ಮುಂದಾಗಿದ್ದಾರೆ. ಹೌದು ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ, ಇದೀಗ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಬಸ್ಸಿನಲ್ಲಿ ಟಿಕೆಟ್ ತೆಗೆದು ಕೊಳ್ಳಬೇಡಿ, ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಮನೆ ಮನೆಗೆ ತೆರಳಿ ಮಹಿಳೆಯರಿಗೆ ಮನವರಿಕೆ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋತ ಬಳಿಕ ದಿನ ಬೆಳಗಾದ್ರೆ ಹಳ್ಳಿ ಹಳ್ಳಿ ಸುತ್ತುತ್ತಿರುವ ಎಂ.ಪಿ‌.ರೇಣುಕಾಚಾರ್ಯ. ಅವರು ಬಿಟ್ಟಿ ಗ್ಯಾರೆಂಟಿ ಯೋಜನೆ ಹೇಳಿ ಮತ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ನುಡಿದಂತೆ ನಡೆದಿಲ್ಲ. ಜನರು ಜಾಗೃತರಾಗಿ. ಚುನಾವಣೆಯಲ್ಲಿ ನೀಡಿದ ಆಶ್ವಾಸನೆ ಪೂರೈಕೆಗೆ ಒತ್ತಾಯಿಸಿ ಎಂದು ಜನರಿಗೆ ಹೇಳುತ್ತಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 01, 2023 11:51 AM