Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan 3: ನಟ ಪ್ರಕಾಶ್ ರೈ ಒಬ್ಬ ವಿಕೃತ ಮನುಷ್ಯ -ಗುಡುಗಿದ ಮಾಜಿ ಸಚಿವ ಆರ್ ಅಶೋಕ್

Chandrayaan 3: ನಟ ಪ್ರಕಾಶ್ ರೈ ಒಬ್ಬ ವಿಕೃತ ಮನುಷ್ಯ -ಗುಡುಗಿದ ಮಾಜಿ ಸಚಿವ ಆರ್ ಅಶೋಕ್

ಸಾಧು ಶ್ರೀನಾಥ್​
|

Updated on:Aug 23, 2023 | 2:21 PM

Prakash Rai: ಬೆಂಗಳೂರಿನಲ್ಲಿ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪ್ರಕಾಶ್ ರೈ ಕಾರ್ಟೂನ್ ಟ್ವೀಟ್​​ ವಿಚಾರ ಪ್ರಸ್ತಾಪಿಸಿದ ಅಶೋಕ್ ಅವರು ಪ್ರಕಾಶ್ ರೈ ಒಬ್ಬ ವಿಕೃತ ಮನುಷ್ಯ. ನಾನು ಕೂಡ ಕಾರ್ಟೂನ್ ನೋಡಿದ್ದೇನೆ. ಟೀ ಮಾರುವ ಮೂಲಕ ವಿಜ್ಞಾನಿಗಳನ್ನು ಟೀಕೆ ಮಾಡುವುದನ್ನು ನೋಡಿದ್ರೆ ಇದು ಕೀಳು ಪ್ರವೃತ್ತಿ ಅನ್ಸುತ್ತೆ. ನಿಜ ಜೀವನದಲ್ಲೂ ಪ್ರಕಾಶ್ ರೈ ವಿಲನ್ ಆಗಿದ್ದಾನೆ ಎಂದು ಆರ್. ಅಶೋಕ್ ಲೇವಡಿ ಮಾಡಿದರು.

ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ 3 ಉಡಾವಣೆ (Chandrayaan 3) ಬಗ್ಗೆ ಖ್ಯಾತ ನಟ ಪ್ರಕಾಶ್ ರಾಜ್ ಅವರು ವ್ಯಂಗ್ಯ ಚಿತ್ರ ಬಳಸಿ, ವ್ಯಂಗ್ಯವಾಡಿರುವ ವಿಚಾರವಾಗಿ ಅವರ ವಿರುದ್ಧ ಮಾಜಿ ಸಚಿವ ಆರ್. ಅಶೋಕ್ (Former Minister R Ashok ) ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪ್ರಕಾಶ್ ರೈ ಕಾರ್ಟೂನ್ ಟ್ವೀಟ್​​ ವಿಚಾರ ಪ್ರಸ್ತಾಪಿಸಿದ ಅಶೋಕ್ ಅವರು ಪ್ರಕಾಶ್ ರೈ (Actor Prakash Rai) ಒಬ್ಬ ವಿಕೃತ ಮನುಷ್ಯ. ನಾನು ಕೂಡ ಕಾರ್ಟೂನ್ ನೋಡಿದ್ದೇನೆ. ಟೀ ಮಾರುವ ಮೂಲಕ ವಿಜ್ಞಾನಿಗಳನ್ನು ಟೀಕೆ ಮಾಡುವುದನ್ನು ನೋಡಿದ್ರೆ ಇದು ಕೀಳು ಪ್ರವೃತ್ತಿ ಅನ್ಸುತ್ತೆ. ಸಾಕಷ್ಟು ಕಲಾವಿದರನ್ನು ನೋಡಿದ್ದೇನೆ. ಈತನೂ ಸಹ ಕಲಾವಿದ. ಆದರೆ ಡಾ.ರಾಜಕುಮಾರ್ ಹಾಗೂ ರಜನಿಕಾಂತ್ ಅವ್ರರೆಲ್ಲಾ ಉತ್ತಮ ಕಲಾವಿದರು. ಆದರೆ ಇವರನ್ನು ಕಲಾವಿದ ಅಂತ ಕರೆಯೋಕೆ ಆಗಲ್ಲ. ಸಿನೆಮಾ ರೀತಿಯಲ್ಲೇ ನಿಜ ಜೀವನದಲ್ಲೂ ಪ್ರಕಾಶ್ ರೈ ವಿಲನ್ ಆಗಿದ್ದಾನೆ ಎಂದು ಆರ್. ಅಶೋಕ್ ಲೇವಡಿ ಮಾಡಿದರು.

ಮತ್ತಷ್ಟು ಕನ್ನಡ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 23, 2023 02:21 PM