Video: ನವೆಂಬರ್‌ನಲ್ಲಿ ಸರ್ಕಾರ ಬದಲಾವಣೆ? ಕೆ.ಎನ್. ರಾಜಣ್ಣ ಹೇಳಿದ್ದೇನು?
ತುಮಕೂರಿನಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ನವೆಂಬರ್ ರಾಜಕೀಯ ಕ್ರಾಂತಿ ನಡೆಯುತ್ತದೆ, ಸಿಎಂ ಬದಲಾವಣೆ ಖಂಡಿತ ಎಂಬೆಲ್ಲಾ ಕುರಿತ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ. ರಾಜ್ಯದಲ್ಲಿ ಯಾವುದೇ ಬದಲಾವಣೆಗಳಿಲ್ಲ, ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಕಾಲ ಆಡಳಿತವನ್ನು ನಡೆಸುತ್ತದೆ. ಬಿಜೆಪಿಯವರು ಸುಳ್ಳು ಹೇಳುವುದೇ ಒಂದು ಅಭ್ಯಾಸವಾಗಿದೆ ಎಂದು ಹೇಳಿದರು.
ತುಮಕೂರು, ಅ.4: ತುಮಕೂರಿನಲ್ಲಿ ಕಾಂಗ್ರೆಸ್ನ ಮಾಜಿ ಸಚಿವ ಕೆ.ಎನ್. ರಾಜಣ್ಣ (K.N. Rajanna) ಅವರು ನವೆಂಬರ್‌ನಲ್ಲಿ ಸರ್ಕಾರದಲ್ಲಿ ಬದಲಾವಣೆ ಆಗಲಿದೆ ಎಂಬ ಊಹಾಪೋಹಕ್ಕೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದು, ನವೆಂಬರ್‌ನಲ್ಲಿ ಕ್ರಾಂತಿ ಅಥವಾ ಬದಲಾವಣೆ ಆಗುತ್ತದೆ ಎಂದು ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ. ಆದರೆ ನನ್ನ ಪ್ರಕಾರ, ಯಾವುದೇ ಬದಲಾವಣೆಗಳಾಗುವುದಿಲ್ಲ ಮತ್ತು ಇಂತಹ ಊಹಾಪೋಹಗಳಿಗೆ ಯಾವುದೇ ಅವಕಾಶವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಕಾಲ ಇರುತ್ತದೆ. ಬಿಜೆಪಿಯವರು ಸುಳ್ಳು ಹೇಳಲು ರೂಢಿ ಮಾಡಿಕೊಂಡಿದ್ದಾರೆ. ಸುಳ್ಳುಗಳ ಮೂಲಕವೇ ಅವರು ರಾಜ್ಯ ಮತ್ತು ರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದರು. ಜತೆಗೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು, ಅಂದರೆ ಕಾರ್ಪೊರೇಷನ್, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ಆದಷ್ಟು ಬೇಗ ನಡೆಸುವ ಉದ್ದೇಶ ಹೊಂದಿದೆ ಎಂದು ಹೇಳಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

