ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ: ಯುವತಿಯರೊಂದಿಗೆ ಹೆಜ್ಜೆ ಹಾಕಿದ ಮಾಜಿ ಸಚಿವ

Edited By:

Updated on: Oct 05, 2026 | 8:55 AM

ದಾವಣಗೆರೆ ಜಿಲ್ಲೆಯ ಹೊನ್ನಾಳಿ ನಗರದಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಸಂಭ್ರಮದಿಂದ ನಡೆದಿತ್ತು. ಈ ಉತ್ಸವದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಪಾಲ್ಗೊಂಡು ಡಿಜೆ ಸದ್ದಿಗೆ ಯುವತಿಯರೊಂದಿಗೆ ಹೆಜ್ಜೆ ಹಾಕುವ ಮೂಲಕ ಎಲ್ಲರ ಗಮನ ಸೆಳೆದರು. ಗಣೇಶನ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದ ಈ ಘಟನೆ ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.

ದಾವಣಗೆರೆ, ಅ.5: ಜಿಲ್ಲೆಯ ಹೊನ್ನಾಳಿ ನಗರದಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಅವರು ಸಖತ್​​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ಭಾರೀ ವೈರಲ್ ಆಗುತ್ತಿದೆ. ಹೊನ್ನಾಳಿ ನಗರದಲ್ಲಿ ಆಯೋಜಿಸಲಾಗಿದ್ದ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯು ಸಂಭ್ರಮದಿಂದ ಕೂಡಿತ್ತು. ಈ ವೇಳೆ ಡಿಜೆ ಸಂಗೀತದ ಸದ್ದು ಕೇಳುತ್ತಿದ್ದಂತೆ, ಅಲ್ಲಿ ನೆರೆದಿದ್ದ ಯುವತಿಯರು ಮತ್ತು ಮಹಿಳೆಯರೊಂದಿಗೆ ಮಾಜಿ ಸಚಿವ ರೇಣುಕಾಚಾರ್ಯ ಹೆಜ್ಜೆ ಹಾಕಿದ್ದಾರೆ. ಹಿಂದೂ ಮಹಾ ಗಣಪತಿ ಉತ್ಸವಗಳ ಆಚರಣೆಯ ಭಾಗವಾಗಿ ನಡೆಯುವ ವಿಸರ್ಜನಾ ಮೆರವಣಿಗೆಗಳು ಜನರಲ್ಲಿ ಸೌಹಾರ್ದತೆ ಮತ್ತು ಸಂಭ್ರಮವನ್ನು ಮೂಡಿಸುತ್ತವೆ. ಈ ಮೆರವಣಿಗೆಯಲ್ಲಿ ಜನಪ್ರತಿನಿಧಿಗಳು ಭಾಗವಹಿಸಿ, ಸಾರ್ವಜನಿಕರೊಂದಿಗೆ ಬೆರೆತು ಸಂಭ್ರಮಿಸುವುದು ಸಾಮಾನ್ಯವಾಗಿದೆ. ರೇಣುಕಾಚಾರ್ಯ ಅವರ ಈ ನೃತ್ಯವು ಮೆರವಣಿಗೆಗೆ ಇನ್ನಷ್ಟು ಮೆರುಗು ನೀಡಿದ್ದು, ಸ್ಥಳೀಯರಲ್ಲಿ ಸಂತೋಷವನ್ನುಂಟು ಮಾಡಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More