V Somanna: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನ ಹೊಣೆಗಾರಿಕೆಗೆ ಸಿದ್ಧ ಎಂದ ಮಾಜಿ ಸಚಿವ ವಿ ಸೋಮಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Jun 23, 2023 | 3:09 PM

45 ವರ್ಷಗಳ ರಾಜಕೀಯ ಅನುಭವ ತನಗಿರುವುದರಿಂದ ರಾಜ್ಯದಲ್ಲಿ ಬಿಜೆಪಿ ನಾಯಕತ್ವ ವಹಿಸಿಕೊಳ್ಳಲು ಸಮರ್ಥನಾಗಿದ್ದೇನೆ ಅಂತ ಸೋಮಣ್ಣ ಹೇಳಿದರು.

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ ನಂತರ ನಳಿನ್ ಕುಮಾರ್ ಕಟೀಲ್ (Nalin Kumar Kateel) ರಾಜ್ಯಾಧ್ಯಕ್ಷ (state president) ಸ್ಥಾನದಿಂದ ಕೆಳಗಿಳಿಯುವ ಇರಾದೆ ವ್ಯಕ್ತಪಡಿಸಿದ್ದರು. ಅದರೆ ಹೈಕಮಾಂಡ್ ಮುಂದುವರಿಯುವಂತೆ ಸೂಚಿಸಿತ್ತು. ಈಗ ಪುನಃ ಆ ವಿಷಯ ಮುನ್ನೆಲೆಗೆ ಬಂದಿದೆ. ಪಕ್ಷ ಒಬ್ಬ ಹೊಸ ರಾಜ್ಯಾಧ್ಯಕ್ಷನ ಹುಡುಕಾಟದಲ್ಲಿರುವ ಸುದ್ದಿಯಿದ್ದು ಇದೇ ಹಿನ್ನೆಲೆಯಲ್ಲಿ ಸಜ್ಜನ ರಾಜಕಾರಣಿ ಎಂದು ಗುರುತಿಸಿಕೊಂಡಿರುವ ಮಾಜಿ ಸಚಿವ ವಿ ಸೋಮಣ್ಣ (V Somanna) ಹೊಣೆಗಾರಿಕೆ ವಹಿಸಿಕೊಳ್ಳುವ ಮಾತಾಡುತ್ತಿದ್ದಾರೆ. ನಗರದಲ್ಲಿಂದು ಟಿವಿ9 ಕನ್ನಡ ವಾಹಿನಿ ವರದಿಗಾರನೊಂದಿಗೆ ಮಾತಾಡಿದ ಸೋಮಣ್ಣ ಬಿಜೆಪಿಯಲ್ಲಿ 15 ವರ್ಷ ಸೇರಿದಂತೆ ಒಟ್ಟು 45 ವರ್ಷಗಳ ರಾಜಕೀಯ ಅನುಭವ ತನಗಿರುವುದರಿಂದ ರಾಜ್ಯದಲ್ಲಿ ಬಿಜೆಪಿ ನಾಯಕತ್ವ ವಹಿಸಿಕೊಳ್ಳಲು ಸಮರ್ಥನಾಗಿದ್ದೇನೆ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.