ಅಂದು ಕುಮಾರಸ್ವಾಮಿ ಪ್ರಜ್ವಲ್​ದು ತಪ್ಪಿದ್ರೆ ಕ್ಷಮಿಸಿ ಅಂದಿದ್ದು ಇದೇ ತಪ್ಪಿಗಾ? ಎಟಿ ರಾಮಸ್ವಾಮಿ ಪ್ರಶ್ನೆ

Updated on: May 02, 2024 | 12:12 PM

ಅಂದು ಹಾಸನದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಜ್ವಲ್​ ನನ್ನ ಮಗ ಎಂದಿದ್ದ ಕುಮಾರಸ್ವಾಮಿ ಈಗ ಅವರದ್ದು ನಮ್ಮದು ಬೇರೆ ಕುಟುಂಬ ಎಂದು ಹೇಳುತ್ತಿದ್ದಾರೆ ಎಂದು ಮಾಜಿ ಶಾಸಕ ಎಟಿ ರಾಮಸ್ವಾಮಿ ಹೇಳಿದ್ದಾರೆ. ಅಂದು ಚುನಾವಣಾ ಸಮಯದಲ್ಲಿ ಜನರ ಮುಂದೆ ಬಂದು ಪ್ರಜ್ವಲ್​ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದು ಕೇಳಿದ್ದರು, ಹಾಗಿದ್ದರೆ ಅವರು ಕ್ಷಮೆ ಕೇಳಿದ್ದು ಇದೇ ತಪ್ಪಿಗಾ ಎಂದು ಪ್ರಶ್ನಿಸಿದ್ದಾರೆ.

ಅಂದು ಹಾಸನದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಜ್ವಲ್​ ನನ್ನ ಮಗ ಎಂದಿದ್ದ ಕುಮಾರಸ್ವಾಮಿ(HD Kumaraswamy) ಈಗ ಅವರದ್ದು ನಮ್ಮದು ಬೇರೆ ಬೇರೆ ಕುಟುಂಬ ಎಂದು ಹೇಳುತ್ತಿದ್ದಾರೆ ಎಂದು ಮಾಜಿ ಶಾಸಕ ಎಟಿ ರಾಮಸ್ವಾಮಿ ಹೇಳಿದ್ದಾರೆ.

ಅಂದು ಚುನಾವಣಾ ಸಮಯದಲ್ಲಿ ಜನರ ಮುಂದೆ ಬಂದು ಪ್ರಜ್ವಲ್​ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದು ಕೇಳಿದ್ದರು, ಹಾಗಿದ್ದರೆ ಅವರು ಕ್ಷಮೆ ಕೇಳಿದ್ದು ಇದೇ ತಪ್ಪಿಗಾ ಎಂದು ಪ್ರಶ್ನಿಸಿದ್ದಾರೆ.

ಮಾತುಗಳು ಗಳಿಗೆಗೆ ಸಂದರ್ಭಕ್ಕೆ ತಕ್ಕಂತೆ ಬದಲಾವಣೆಯಾಗಬಾರದು, ರಾಜಕಾರಣಿಯಾದವನು ಮಾತನಾಡಿದಂತೆ ನಡೆದುಕೊಳ್ಳಬೇಕು. ಮತ್ತೆ ಹೇಳುತ್ತೇನೆ ಈ ವಿಚಾರದಲ್ಲಿ ರಾಜಕೀಯ ಬೆರೆಸಬೇಡಿ ಎಂದರು.

ವೈಯಕ್ತಿಕ ಪ್ರತಿಷ್ಠೆಯನ್ನು ಬೆಳೆಸಿಕೊಳ್ಳಲು ಹೋಗಬೇಡಿ, ತಪ್ಪಿದ್ದರೆ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ, ತಪ್ಪಿಲ್ಲ ಅಂದರೆ ಯಾರು ಈ ರೀತಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More