ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಸೌಮ್ಯರೆಡ್ಡಿ

ಅರುಣ್​ ಕುಮಾರ್​ ಬೆಳ್ಳಿ

Updated on: Oct 17, 2024 | 7:46 PM

ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ವೇದಿಕೆ ಬಳಿಯಿದ್ದ ಜನರ ನಡುವಿನಿಂದ ನುಸುಳಿಕೊಂಡ ಮುಗುಳ್ನಗುವುದನ್ನು ನಿಲ್ಲಿಸದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಕುಲುಕಿದರು. ಸಿಎಂ ತಮ್ಮ ಪಕ್ಕದಲ್ಲಿದ ಚೇರನ್ನು ತೋರಿಸಿ ಕೂತ್ಕೊಳ್ಳಿ ಅಂತ ಹೇಳಿದರೆ ಶಿವಕುಮಾರ್ ಅಲ್ಕಾ ಮತ್ತು ಇತರ ಸದಸ್ಯೆಯರೊಂದಿಗೆ ಮಾತಾಡತೊಡಗಿದರು.

ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಕ ಕೂತಿದ್ದ ಸೌಮ್ಯ ಖಷಿಯಿಂದ ಬೀಗುತ್ತಿರುವುದು ಸಹಜವಾಗಿತ್ತು. ಚಿಕ್ಕ ವಯಸ್ಸಿನಲ್ಲಿ ಅವರಿಗೆ ದೊಡ್ಡ ಜವಾಬ್ದಾರಿ ವಹಿಸಲಾಗಿದೆ. ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕೆಪಿಸಿಸಿ ಕಚೇರಿ ಜನಸ್ಪಂದನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ 4 ಪೌರ ಕಾರ್ಮಿಕರಿಗೆ ಮನೆ ನೀಡಲು ಹೇಳಿದರು

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.