ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಗೊತ್ತಾ?

Updated on: Jun 21, 2026 | 4:19 PM

ಪುಲಿಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಬಿಜೆಪಿ ತೊರೆದು ವಾಪಸ್ ಮಾತೃಪಕ್ಷ ಜೆಡಿಎಸ್​​​ ಸೇರ್ಪಡೆಯಾಗಿದ್ದಾರೆ. ಇಂದು (ಜೂನ್ 21) ಬೆಂಗಳೂರಿನಲ್ಲಿ ಕೇಂದ್ರ ಸಚಿವ, ಜೆಡಿಎಸ್ ರಾಜ್ಯಾಧ್​ಯಕ್ಷ ಎಚ್​​ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಜೆಡಿಎಸ್ ಸೇರ್ಪಡೆಯಾದರು. 2013ರಲ್ಲಿ ಜೆಡಿಎಸ್‌ನಿಂದಲೇ ರಾಜಕೀಯ ಪ್ರವೇಶಿಸಿದ್ದ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಬಳಿಕ ನಡೆದ ಕೆಲ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ಬಿಎಸ್​​ಪಿ ಸೇರ್ಪಡೆಯಾಗಿದ್ದರು. ಇದೀಗ ಅಂತಿಮವಾಗಿ ವಾಪಸ್ ಜೆಡಿಎಸ್​ ಮನೆ ಸೇರಿಕೊಂಡಿದ್ದಾರೆ.

ಬೆಂಗಳೂರು, (ಜೂನ್ 21): ಪುಲಿಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಬಿಜೆಪಿ ತೊರೆದು ವಾಪಸ್ ಮಾತೃಪಕ್ಷ ಜೆಡಿಎಸ್​​​ ಸೇರ್ಪಡೆಯಾಗಿದ್ದಾರೆ. ಇಂದು (ಜೂನ್ 21) ಬೆಂಗಳೂರಿನಲ್ಲಿ ಕೇಂದ್ರ ಸಚಿವ, ಜೆಡಿಎಸ್ ರಾಜ್ಯಾಧ್​ಯಕ್ಷ ಎಚ್​​ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಜೆಡಿಎಸ್ ಸೇರ್ಪಡೆಯಾದರು. 2013ರಲ್ಲಿ ಜೆಡಿಎಸ್‌ನಿಂದಲೇ ರಾಜಕೀಯ ಪ್ರವೇಶಿಸಿದ್ದ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಬಳಿಕ ನಡೆದ ಕೆಲ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ಬಿಎಸ್​​ಪಿ ಸೇರ್ಪಡೆಯಾಗಿದ್ದರು. ಇದೀಗ ಅಂತಿಮವಾಗಿ ವಾಪಸ್ ಜೆಡಿಎಸ್​ ಮನೆ ಸೇರಿಕೊಂಡಿದ್ದಾರೆ.

ಕಲ ದಿನಗಳ ಹಿಂದೆಯಷ್ಟೇ ಎಚ್‌.ಡಿ.ಕುಮಾರಸ್ವಾಮಿ ಅವರು ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಜೆಡಿಎಸ್‌ ಸೇರ್ಪಡೆಗೆ ಅಖಂಡ ಉತ್ಸುಕರಾಗಿರುವ ಬಗ್ಗೆ ತಿಳಿಸಿದ್ದರು. ಇನ್ನು ಶ್ರೀನಿವಾಸಮೂರ್ತಿ ಅವರು ಪುಲಿಕೇಶಿನಗರ ಅಥವಾ ನೆಲಮಂಗಲ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದು, 2028ರ ಚುನಾವಣೆಯಲ್ಲಿ ಯಾವ ಕ್ಷೇತ್ರದ ಟಿಕೆಟ್ ಸಿಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More