KP Nanjundi Joined Congress: ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ ಕೆಪಿ ನಂಜುಂಡಿ

KP Nanjundi Joined Congress: ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ ಕೆಪಿ ನಂಜುಂಡಿ

ವಿವೇಕ ಬಿರಾದಾರ
|

Updated on:Apr 24, 2024 | 11:53 AM

ವಿಧಾನ ಪರಿಷತ್ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿ, ಕೆಪಿ ನಂಜುಂಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್​​ ಸುರ್ಜೇವಾಲ ನೇತೃತ್ವದಲ್ಲಿ ಕೈ ಹಿಡಿದರು. ನಂಜುಂಡಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು.

ವಿಧಾನ ಪರಿಷತ್ ಮತ್ತು ಬಿಜೆಪಿಯ (BJP) ಪಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿ, ಕೆಪಿ ನಂಜುಂಡಿ (KP Nanjundi) ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar), ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್​​ ಸುರ್ಜೇವಾಲ ನೇತೃತ್ವದಲ್ಲಿ ಕೈ ಹಿಡಿದರು. ನಂಜುಂಡಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಬಣದಲ್ಲಿ ಗುರುತಿಸಿಕೊಂಡಿದ್ದರು. ಸುಮಾರು ಒಂದು ವಾರದಿಂದ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಭೇಟಿಯ ನಂತರ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಗುಮಾನಿ ಹುಟ್ಟಿತ್ತು. ಇದೀಗ ಅಧಿಕೃತವಾಗಿ ಕಾಂಗ್ರೆಸ್​ ಪಕ್ಷ ಸೇರಿದ್ದಾರೆ. ರಾಜೀನಾಮೆ ಕೊಡುವಂತೆ ಎರಡು ವರ್ಷದಿಂದ ನಮ್ಮ ಸಮಾಜದ ಒತ್ತಡವಿತ್ತು. ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ, ನಮ್ಮ ಹೋರಾಟಕ್ಕೆ ಬೆಲೆ ಇಲ್ಲವಾಗಿದೆ. ಹೀಗಾಗಿ ನಾನು ಎಂಎಲ್‌ಸಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದೇನೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್​ ಸೇರಿದ್ದೇನೆ ಎಂದು ಕೆಪಿ ನಂಜುಂಡಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಅಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 24, 2024 11:47 AM