ಕಾಂಗ್ರೆಸ್ ತೊರೆದು ಜೆಡಿ(ಎಸ್) ಸೇರಿದ್ದ ಗಂಗಾವತಿ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀನಾಥ್ ತವರಿಗೆ ಮರಳಿದರು!
ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಶ್ರೀನಾಥ್ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
Bengaluru: ಕಳೆದ ಬಾರಿಯ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ತೊರೆದು ಜೆಡಿ(ಎಸ್) ಸೇರಿದ್ದ ಕೊಪ್ಪಳ ಜಿಲ್ಲೆ ಗಂಗಾವತಿಯ (Gangavati) ಮಾಜಿ ವಿಧಾನ ಪರಿಷತ್ ಸದಸ್ಯ ಹೆಚ್ ಆರ್ ಶ್ರೀನಾಥ್ (HR Srinath) ತವರಿಗೆ ಹಿಂತಿರುಗಿದ್ದಾರೆ. ಚುನಾವಣಾ ವರ್ಷದಲ್ಲಿ ಇದೆಲ್ಲ ಮಾಮೂಲು ಅಂತ ನಮಗೆ ಗೊತ್ತಿದೆ. ಕಳೆದ ಕೆಲ ದಿನಗಳಿಂದ ಶ್ರೀನಾಥ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಜೊತೆ ನಿರಂತರ ಸಂಪರ್ಕದಲ್ಲಿದ್ದರು. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಶ್ರೀನಾಥ್ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.