ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಮುನಿರತ್ನ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ 

Updated on: Sep 20, 2024 | 2:53 PM

ಅತ್ಯಾಚಾರ ಆರೋಪದಲ್ಲಿ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರು ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರದ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್​ ವಾಗ್ದಾಳಿ ಮಾಡಿದ್ದಾರೆ.

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ (BJP) ಶಾಸಕ ಮುನಿರತ್ನ (Munirathna) ಅವರನ್ನು ಬಂಧಿಸಲಾಗಿದೆ. ಈ ವಿಚಾರವಾಗಿ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್ (DK Suresh)​ ಮಾತನಾಡಿ, ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ ಎಂದು ವಾಗ್ದಾಳಿ ಮಾಡಿದರು. ತನಿಖೆಗೆ ಒಂದು ವಿಶೇಷ ತಂಡ ರಚನೆಯಾಗಬೇಕು. ಯಾರು ಯಾರನ್ನು ಯಾವ ಯಾವ ಸಂದರ್ಭದಲ್ಲಿ ಬಳಸಿಕೊಂಡಿದ್ದಾರೆ? ಎಸ್ಐಟಿ ಅಥವಾ ಬೇರೆ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಬೇಕೆಂದು ಒತ್ತಾಯಿಸಿದ್ದೇವೆ. ತನಿಖೆಯಿಂದ ಬಿಜೆಪಿ ನಾಯಕರ ಬಣ್ಣ ಬಯಲಾಗಬೇಕು. ಸಿ.ಟಿ.ರವಿ, ಆರ್.ಅಶೋಕ್, ಹೆಚ್​ಡಿ ಕುಮಾರಸ್ವಾಮಿ ಅವರ ಬೆನ್ನಿಗೆ ನಿಂತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಮುನಿರತ್ನ ಬಳಿ ಇದೆ ಹಲವರ ಖಾಸಗಿ ವಿಡಿಯೋ, ಎದುರಾಳಿಗಳ ಹಣಿಯಲು ಬಳಕೆ: ದೂರಿನಲ್ಲಿ ಉಲ್ಲೇಖ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More