ಪ್ರಜ್ವಲ್ ರೇವಣ್ಣ ಹುಟ್ಟು ಹಬ್ಬದ ಹಿನ್ನೆಲೆ ಹಾಸನದಲ್ಲಿ ರಾರಾಜಿಸಿದ ಫ್ಲೆಕ್ಸ್ಗಳು
ಹಾಸನದಲ್ಲಿ ಎರಡು ವರ್ಷಗಳ ಬಳಿಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಪ್ರತ್ಯಕ್ಷವಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ಗೆ ಹುಟ್ಟು ಹಬ್ಬದ ಶುಭಕೋರಿ ಹೊಳೆನರಸೀಪುರದ ಅಂಬೇಡ್ಕರ್ ವೃತ್ತದಲ್ಲಿ ದೊಡ್ಡ ಫ್ಲೆಕ್ಸ್ ಅಳವಡಿಸಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಸದ್ಯ ಪ್ರಜ್ವಲ್ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ನಡುವೆಯೂ ಹಾಕಿರುವ ಫ್ಲೆಕ್ಸ್ಗಳು ಚರ್ಚೆಗೆ ಗ್ರಾಸವಾಗಿದೆ.
ಹಾಸನ, ಆಗಸ್ಟ್ 05: ಎರಡು ವರ್ಷಗಳ ಬಳಿಕ ಹಾಸನದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು ಮತ್ತೆ ಪ್ರತ್ಯಕ್ಷವಾಗಿವೆ. ಇಂದು ಪ್ರಜ್ವಲ್ ಹುಟ್ಟು ಹಬ್ಬದ ಹಿನ್ನೆಲೆ ಹೊಳೆನರಸೀಪುರದ ಅಂಬೇಡ್ಕರ್ ವೃತ್ತದಲ್ಲಿ ದೊಡ್ಡ ದೊಡ್ಡ ಫ್ಲೆಕ್ಸ್ ಹಾಕಿ ಶುಭಾಶಯ ಕೋರಲಾಗಿದೆ. ಸಂಸದರಾಗಿದ್ದ ವೇಳೆ ಹಲವು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧನಕ್ಕ ಒಳಗಾಗಿದ್ದ ಪ್ರಜ್ವಲ್, ಸದ್ಯ ಒಂದು ಕೇಸ್ನಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವದಿ ಶಿಕ್ಷೆಗೆ ಗುರಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ ಎನ್ನುವುದಿಲ್ಲಿ ಗಮನಾರ್ಹ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

