ಪ್ರಜ್ವಲ್ ರೇವಣ್ಣ ಹುಟ್ಟು ಹಬ್ಬದ ಹಿನ್ನೆಲೆ ಹಾಸನದಲ್ಲಿ ರಾರಾಜಿಸಿದ ಫ್ಲೆಕ್ಸ್​​ಗಳು

Edited By:

Updated on: Aug 05, 2026 | 4:44 PM

ಹಾಸನದಲ್ಲಿ ಎರಡು ವರ್ಷಗಳ ಬಳಿಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಪ್ರತ್ಯಕ್ಷವಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಪ್ರಜ್ವಲ್​ಗೆ ಹುಟ್ಟು ಹಬ್ಬದ ಶುಭಕೋರಿ ಹೊಳೆನರಸೀಪುರದ ಅಂಬೇಡ್ಕರ್ ವೃತ್ತದಲ್ಲಿ ದೊಡ್ಡ ಫ್ಲೆಕ್ಸ್ ಅಳವಡಿಸಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಸದ್ಯ ಪ್ರಜ್ವಲ್​​ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ನಡುವೆಯೂ ಹಾಕಿರುವ ಫ್ಲೆಕ್ಸ್​​ಗಳು ಚರ್ಚೆಗೆ ಗ್ರಾಸವಾಗಿದೆ.

ಹಾಸನ, ಆಗಸ್ಟ್​​ 05: ಎರಡು ವರ್ಷಗಳ ಬಳಿಕ ಹಾಸನದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು ಮತ್ತೆ ಪ್ರತ್ಯಕ್ಷವಾಗಿವೆ. ಇಂದು ಪ್ರಜ್ವಲ್ ಹುಟ್ಟು ಹಬ್ಬದ ಹಿನ್ನೆಲೆ ಹೊಳೆನರಸೀಪುರದ ಅಂಬೇಡ್ಕರ್ ವೃತ್ತದಲ್ಲಿ ದೊಡ್ಡ ದೊಡ್ಡ ಫ್ಲೆಕ್ಸ್ ಹಾಕಿ ಶುಭಾಶಯ ಕೋರಲಾಗಿದೆ. ಸಂಸದರಾಗಿದ್ದ ವೇಳೆ ಹಲವು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧನಕ್ಕ ಒಳಗಾಗಿದ್ದ ಪ್ರಜ್ವಲ್, ಸದ್ಯ ಒಂದು ಕೇಸ್​​ನಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವದಿ ಶಿಕ್ಷೆಗೆ ಗುರಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ ಎನ್ನುವುದಿಲ್ಲಿ ಗಮನಾರ್ಹ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

 

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More