AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್!

ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್!

ರಾಮ್​, ಮೈಸೂರು
| Edited By: |

Updated on: Sep 23, 2026 | 7:02 AM

Share

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಇನ್ಸ್‌ಪೆಕ್ಟರ್ ಧನಂಜಯ್ ಅವರ ಜಾತಿಯನ್ನು ಉಲ್ಲೇಖಿಸಿ ಅವಹೇಳನ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಧು ದೂರು ನೀಡಿದ್ದಾರೆ. ಈ ಪ್ರಕರಣವು ಹಿಂದಿನ ಘರ್ಷಣೆ ಮತ್ತು ಪ್ರತಿಭಟನೆಗೆ ಸಂಬಂಧಿಸಿದೆ.

ಮೈಸೂರು, ಸೆಪ್ಟೆಂಬರ್ 23: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಇನ್ಸ್‌ಪೆಕ್ಟರ್ ಧನಂಜಯ್ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ. ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಮಧು ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಈ ಹಿಂದೆ ಇನ್ಸ್‌ಪೆಕ್ಟರ್ ಧನಂಜಯ್ ಅವರು ಎಚ್ಚರಿಕೆ ನೀಡಿದ್ದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯಲ್ಲಿ ಪ್ರತಾಪ್ ಸಿಂಹ ಅವರು ಮುಂಚೂಣಿಯಲ್ಲಿದ್ದು, ನೇರ ಸವಾಲು ಹಾಕಿ, ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಘಟನೆಯ ಬಳಿಕ ಅವರ ವಿರುದ್ಧ ಒಂದು ಎಫ್‌ಐಆರ್ ದಾಖಲಾಗಿತ್ತು. ಈಗ, ಇನ್ಸ್‌ಪೆಕ್ಟರ್ ಧನಂಜಯ್ ಅವರ ಜಾತಿ ಹೆಸರನ್ನು ಹೇಳಿ ಅವಹೇಳನ ಮಾಡಿದ್ದಾರೆ ಎಂದು ಮಧು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ದಲಿತ ಸಂಘರ್ಷ ಸಮಿತಿ ಮತ್ತು ಇತರೆ ಸಂಘಟನೆಗಳು ನಡೆಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಪ್ರತಾಪ್ ಸಿಂಹ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us