ಯತ್ನಾಳ್ ಬಣದವರೆಂದು ಗುರುತಿಸಿಕೊಂಡಿರುವ ಪ್ರತಾಪ್ ಸಿಂಹ ಇವತ್ತಿನ ಬಿಜೆಪಿ ಸಭೆಯಲ್ಲಿ ಪಾಲ್ಗೊಂಡರು

ಯತ್ನಾಳ್ ಬಣದವರೆಂದು ಗುರುತಿಸಿಕೊಂಡಿರುವ ಪ್ರತಾಪ್ ಸಿಂಹ ಇವತ್ತಿನ ಬಿಜೆಪಿ ಸಭೆಯಲ್ಲಿ ಪಾಲ್ಗೊಂಡರು

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 09, 2025 | 2:15 PM

ಪಕ್ಷದ ಶಿಸ್ತು ಸಮಿತಿ ನೀಡಿದ ಶೋಕಾಸ್ ನೋಟೀಸ್​ಗೆ ದೆಹಲಿಯಲ್ಲಿ ಉತ್ತರ ಹೇಳಿ ಬಂದ ನಂತರ ಬಸನಗೌಡ ಯತ್ನಾಳ್ ಮಾಧ್ಯಮಗಳ ಜೊತೆ ಮಾತಾಡುವುದನ್ನು ಬಹಳಷ್ಟು ಕಡಿಮೆ ಮಾಡಿದ್ದಾರೆ. ಇವತ್ತಿನ ಸಭೆಯಲ್ಲೂ ಅವರು ಪಾಲ್ಗೊಂಡಿರಲಿಲ್ಲ. ಆದರೆ ಬಿಜೆಪಿ ಸೇರಿದ ಬಳಿಕ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಟಿಕೆಟ್ ನೀಡದ ಕಾರಣ ಮುನಿಸಿಕೊಂಡಿದ್ದ ಸುಮಲತಾ ಅಂಬರೀಶ್ ಇವತ್ತಿನ ಸಭೆಯಲ್ಲಿ ಭಾಗಿಯಾಗಿದ್ದರು.

ಬೆಂಗಳೂರು: ನಗರದ ಬಿಜೆಪಿ ಕಚೇರಿಯಲ್ಲಿ ಪಕ್ಷದ ಸಂಸದರು, ಶಾಸಕರು ಮತ್ತು ಮುಖಂಡರ ಸಭೆ ಆಯೋಜಿಸಲಾಗಿದೆ. ಸಭೆಯನ್ನು ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆಯಾದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೀಡ್ ತೆಗೆದುಕೊಂಡಿದ್ದಾರೆ. ಇಲ್ಲಿ ಹೇಳಬಯಸುವ ವಿಷಯವೇನೆಂದರೆ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದವರೆಂದು ಗುರುತಿಸಿಕೊಂಡಿರುವ ಪ್ರತಾಪ್ ಸಿಂಹ, ಬಿಪಿ ಹರೀಶ್, ಚಂದ್ರಪ್ಪ ಮೊದಲಾದವರು ಸಭೆಯಲ್ಲಿ ಪಾಲ್ಗೊಂಡರು. ಆದರೆ ಯತ್ನಾಳ್ ಮಾತ್ರ ಎಲ್ಲೂ ಕಾಣಲಿಲ್ಲ. ಎರಡನೇ ಹಂತದ ವಕ್ಫ್ ಹೋರಾಟದ ಮಾಹಿತಿಯನ್ನು ದೆಹಲಿಗೆ ತೆರಳಿ ಜೆಪಿಸಿಯ ಅಧಿಕಾರಿಗಳೊಂದಿಗೆ ಹಂಚಿಕೊಂಡಿರುವ ಪ್ರತಾಪ್ ಇವತ್ತು ಬಿಜೆಪಿ ಸಭೆಗೆ ಹಾಜರಾದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮೈಸೂರಿನ ಪ್ರಮುಖ ರಸ್ತೆಗೆ ಸಿದ್ದರಾಮಯ್ಯ ಹೆಸರು, ಶುರುವಾಯ್ತು ಪರ-ವಿರೋಧ ಚರ್ಚೆ: ಪ್ರತಾಪ್ ಸಿಂಹ ಬೆಂಬಲ