ವಿಧಾನಸಭೆ ಚುನಾವಣೆಗೆ ಪ್ರತಾಪ್ ಸಿಂಹ ಸ್ಪರ್ಧೆ ಫಿಕ್ಸ್: ಕ್ಷೇತ್ರ ಯಾವುದು ಗೊತ್ತಾ?
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದು, ತಾನು ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದಿದ್ದಾರೆ. ಆದರೆ ಪಕ್ಷವೇ ಅಂತಿಮ ಅಭ್ಯರ್ಥಿಯನ್ನು ನಿರ್ಧರಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ವಾಸು ಮತ್ತು ಶಂಕರಲಿಂಗೇಗೌಡರಂತಹ ಜನಸ್ನೇಹಿ ನಾಯಕರ ಹಾದಿಯಲ್ಲಿ ತಾವು ಸಾಗುವುದಾಗಿ ತಿಳಿಸಿದ್ದಾರೆ.
ಮೈಸೂರು, ಜನವರಿ 15: ಇತ್ತೀಚೆಗಷ್ಟೇ ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ತಾನು ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಘೋಷಣೆ ಮಾಡಿದ್ದಾರೆ. ಅಭ್ಯರ್ಥಿಗೂ ಆಕಾಂಕ್ಷಿಗೂ ವ್ಯತ್ಯಾಸ ಇದ್ದು, ವ್ಯತ್ಯಾಸ ಗೊತ್ತಿಲ್ಲದೆ ಕೆಲವರು ಮಾತನಾಡ್ತಿದ್ದಾರೆ. ಅಭ್ಯರ್ಥಿ ಯಾರು ಎಂದು ನಮ್ಮ ಪಕ್ಷ ನಿರ್ಧಾರ ಮಾಡುತ್ತದೆ. ಮುಂದೆ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೇನೆ. ಚಾಮರಾಜ ಕ್ಷೇತ್ರದ ಜನ ವಿದ್ಯಾವಂತ ಪ್ರತಿನಿಧಿ ಬಯಸುತ್ತಾರೆ. ವಾಸು, H.S. ಶಂಕರಲಿಂಗೇಗೌಡರ ಹಾದಿಯಲ್ಲಿ ತಾನು ನಡೆಯುತ್ತೇನೆ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
