ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್

|

Updated on: Jul 04, 2024 | 7:54 PM

ದರ್ಶನ್ ಅನ್ನು ಮಗನೆಂದೇ ಸಂಭೋಧಿಸುತ್ತಾ ಬಂದಿದ್ದ ಮಾಜಿ ಸಂಸದೆ ಸುಮಲತಾ ಅಂಬರೀಶ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿ ತಿಂಗಳಾದ ಬಳಿಕ ಇದೇ ಮೊದಲ ಬಾರಿಗೆ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

ದರ್ಶನ್ ಜನಪ್ರಿಯತೆಯನ್ನು ಬಳಸಿಕೊಂಡು ಹಲವರು ಲಾಭ ಪಡೆದುಕೊಂಡಿದ್ದಾರೆ. ಅದರಲ್ಲಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ಸಹ ಒಬ್ಬರು. ಆದರೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಒಂದು ತಿಂಗಳಾಗುತ್ತಾ ಬಂದಿದ್ದರೂ ಈವರೆಗೂ ಒಮ್ಮೆಯೂ ಸಹ ಪ್ರಕರಣದ ಬಗ್ಗೆ ಸುಮಲತಾ ಮಾತನಾಡಿರಲಿಲ್ಲ. ಆದರೆ ಇಂದು (ಜುಲೈ 04) ಸುಮಲತಾ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದ ಮೂಲಕ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದಾದ ಬಳಿಕ ಮಾಧ್ಯಮಗಳ ಮುಂದೆ ನಿಂತು ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಕೊಲೆ ಮಾಡಿರುವ ಸಾಧ್ಯತೆ ಇಲ್ಲ ಎಂದು ಸಹ ಸುಮಲತಾ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ