ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಪುತ್ರ ಹೆಚ್​​ಡಿ ಕುಮಾರಸ್ವಾಮಿ

Updated on: Jul 17, 2026 | 5:34 PM

ಮೊನ್ನೆ ಸಂಜೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಹೆಚ್.ಡಿ.ಕುಮಾರಸ್ವಾಮಿ ವೈದ್ಯರೊಂದಿಗೆ ಮಾತನಾಡಿ, ತಾಯಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚೆನ್ನಮ್ಮ ಅವರ ಶೀಘ್ರ ಚೇತರಿಕೆಗಾಗಿ ಕುಟುಂಬಸ್ಥರು ಮತ್ತು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಬೆಂಗಳೂರು, ಜುಲೈ 17: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಸೇರಿದಂತೆ ಹೆಚ್​ಡಿ ರೇವಣ್ಣ ಮತ್ತು ಕುಟುಂಬ ಸದಸ್ಯರು ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ್ದಾರೆ. ಮೊನ್ನೆ ಸಂಜೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಹೆಚ್.ಡಿ.ಕುಮಾರಸ್ವಾಮಿ ವೈದ್ಯರೊಂದಿಗೆ ಮಾತನಾಡಿ, ತಾಯಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚೆನ್ನಮ್ಮ ಶೀಘ್ರ ಚೇತರಿಕೆಗಾಗಿ ಕುಟುಂಬಸ್ಥರು ಮತ್ತು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jul 17, 2026 05:30 PM
Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More