ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

|

Updated on: Dec 28, 2024 | 11:08 AM

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಇಂದು (ಶನಿವಾರ) ಬೆಳಗ್ಗೆ 11:45 ಕ್ಕೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಡಾ. ಸಿಂಗ್ ಅವರ ಅಂತಿಮ ಯಾತ್ರೆಯು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಿಂದ ಬೆಳಗ್ಗೆ 9:30 ಕ್ಕೆ ಆರಂಭಗೊಂಡು ಸ್ಮಶಾನಕ್ಕೆ ತೆರಳುತ್ತಿದೆ. ನೇರ ಪ್ರಸಾರ ಇಲ್ಲಿದೆ.

ದೇಶಕಂಡ ಖ್ಯಾತ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಕೆಲವೇ ಕ್ಷಣಗಳಲ್ಲಿ ನೆರವೇರಲಿದೆ. ಸದ್ಯ ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಿಂದ ಸಿಂಗ್ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ನಿಗಮಬೋಧ್ ಘಾಟ್‌ಗೆ ಕೊಂಡೊಯ್ಯಲಾಗುತ್ತಿದೆ. ಸಿಂಗ್ ಅಂತಿಮಯಾತ್ರೆಯ ನೇರ ಪ್ರಸಾರ ಇಲ್ಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 28, 2024 11:06 AM