AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Sunil MH
| Edited By: |

Updated on: Jul 16, 2026 | 6:33 AM

Share

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಟುಂಬಸ್ಥರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಪುತ್ರ ಹೆಚ್​ಡಿ ರೇವಣ್ಣ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಬೆಂಗಳೂರು, ಜುಲೈ 16: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಜತೆಗೆ, ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿದೆ. ಹೆಚ್​ಡಿ ದೇವೇಗೌಡರು ಪತ್ನಿಯ ಆರೋಗ್ಯ ವಿಚಾರಿಸಿ ಮನೆಗೆ ಮರಳಿದ್ದಾರೆ. ಮಗ ಹಾಗೂ ಮಾಜಿ ಸಚಿವರಾಗಿರುವ ಹೆಚ್​ಡಿ ರೇವಣ್ಣ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ. ಚೆನ್ನಮ್ಮ ಅವರಿಗೆ ಮೂರು ದಿನ ಆಸ್ಪತ್ತೆಯಲ್ಲಿ ಚಿಕಿತ್ಸೆ ನೀಡುವ ಸಾಧ್ಯತೆ ಇದೆ ಎಂಬುದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us