ದುಬೈ ಕನ್ನಡಿಗರ ಕನ್ನಡ ಕೂಟ ಸೇರಿದಂತೆ ವಿವಿಧ ಸಂಘಟನೆಗಳಿಂದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ದಂಪತಿಗೆ ಹುಟ್ಟೂರ ಸನ್ಮಾನ

ದುಬೈ ಕನ್ನಡಿಗರ ಕನ್ನಡ ಕೂಟ ಸೇರಿದಂತೆ ವಿವಿಧ ಸಂಘಟನೆಗಳಿಂದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ದಂಪತಿಗೆ ಹುಟ್ಟೂರ ಸನ್ಮಾನ

Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on: Aug 27, 2023 | 11:05 PM

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ದಂಪತಿಗೆ ಭಾನುವಾರ ಕನ್ನಡಿಗರ ಕನ್ನಡ ಕೂಟ, ದುಬೈ, ಯು.ಎ.ಇ ವತಿಯಿಂದ ಸನ್ಮಾನ ಮಾಡಲಾಗಿದೆ. ಚಾಮರಾಜಪೇಟೆಯಲ್ಲಿರುವ ಡಾ.ಅಂಬರೀಶ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬೆಂಗಳೂರು, ಆಗಸ್ಟ್​: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Deve Gowda) ದಂಪತಿಗೆ ಭಾನುವಾರ ಕನ್ನಡಿಗರ ಕನ್ನಡ ಕೂಟ, ದುಬೈ, ಯು.ಎ.ಇ ವತಿಯಿಂದ ಸನ್ಮಾನ ಮಾಡಲಾಗಿದೆ. ಚಾಮರಾಜಪೇಟೆಯಲ್ಲಿರುವ ಡಾ.ಅಂಬರೀಶ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಾಜಿ‌‌ ಪ್ರಧಾನಿ ದೇವೇಗೌಡರಿಗೆ ಶಾಲು ಹೊದಿಸಿ ಸ್ಮರಣಿಕೆ ‌‌‌ನೀಡಿ‌ ಗೌರವಿಸಲಾಗಿದ್ದು, ಹಾಗೆಯೇ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಬಾಗಿನ ನೀಡಿ ಗೌರವಿಸಲಾಯಿತು. ನಿರ್ಮಲಾನಂದನಾಥ ಸ್ವಾಮೀಜಿ, ಕನ್ನಡಿಗರ ಕನ್ನಡ ಕೂಟದ ಅಧ್ಯಕ್ಷ ಸಾದನ್ ದಾಸ್, ಗಲ್ಫ್ ಕನ್ನಡಿಗರ ಒಕ್ಕೂಟದ ಅಧ್ಯಕ್ಷ ಇಬ್ರಾಹಿಂ ಖಲೀಲ್​ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ಧರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.