Bengaluru: ಕಾಂಗ್ರೆಸ್ ಸಮಾವೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಟೀಕಿಸುತ್ತಾ ಗೇಲಿ ಮಾಡಿದ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Mar 21, 2023 | 5:43 PM

ವಿದೇಶಗಳಲ್ಲಿರುವ ಭಾರತೀಯರ ಕಪ್ಪುಹಣ ತಂದು ಎಲ್ಲರ ಖಾತೆಗಳಿಗೆ ತಲಾ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದರು. ಯಾರ ಖಾತೆಗೂ 15 ಪೈಸೆ ಕೂಡ ಜಮಾ ಆಗಲಿಲ್ಲ ಎಂದು ಸಿದ್ದರಾಮಯ್ಯ ಕುಹುಕವಾಡಿದರು.

ಬೆಂಗಳೂರು: ನಗರದ ಸರ್ವಜ್ಞ ನಗರ ಕ್ಷೇತ್ರದಲ್ಲಿ ಅಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶವೊಂದರಲ್ಲಿ ಮಾತಾಡಿದ ಸಿದ್ದರಾಮಯ್ಯ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಟೀಕಿಸುತ್ತಾ ಗೇಲಿ ಮಾಡಿದರು. ಕಳೆದ 9 ವರ್ಷಗಳಿಂದ ಪ್ರಧಾನಿ ಮೋದಿಯವರು ಸುಳ್ಳುಗಳನ್ನು ಹೇಳುತ್ತಾ ದೇಶದ ಯುವಜನಾಂಗವನ್ನು (young Indians) ದಾರಿ ತಪ್ಪಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಅಧಿಕಾರಕ್ಕೆ ಬರುವ ಮೊದಲು ಯುವಕರಿಗೆ ಪ್ರತಿವರ್ಷ ಎರಡು ಕೋಟಿ ಉದ್ಯೋಗಗಳನ್ನು ಸೃಷ್ಟಿಮಾಡುವ ಭರವಸೆ ನೀಡಿದ್ದ ಪ್ರಧಾನಿಗಳು ನಂತರ ತಾವು ಹೇಳಿದ್ದನ್ನು ಮರೆತುಬಿಟ್ಟರು. ವಿದೇಶಗಳಲ್ಲಿರುವ ಭಾರತೀಯರ ಕಪ್ಪುಹಣ ತಂದು ಎಲ್ಲರ ಖಾತೆಗಳಿಗೆ ತಲಾ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದರು. ಯಾರ ಖಾತೆಗೂ 15 ಪೈಸೆ ಕೂಡ ಜಮಾ ಆಗಲಿಲ್ಲ ಎಂದು ಕುಹುಕವಾಡಿದರು. ಅವರ ‘ಅಚ್ಛೇ ದಿನ್ ಆಯೆಂಗೆ’ ಸ್ಲೋಗನ್ ಒಂದು ಸ್ಲೋಗನ್ ಆಗೇ ಉಳಿದುಬಿಟ್ಟಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.