ತುಂಗಭದ್ರಾ ಒಳಹರಿವು ನಿಲ್:ಲಕ್ಷಾಂತರ ಹೆಕ್ಟೆರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ ರೈತರಿಗೆ ಆತಂಕ

Edited By:

Updated on: Sep 17, 2026 | 5:45 PM

ನಾಲ್ಕು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತಗೊಂಡಿದೆ. ಕಳೆದ ಒಂದು ವಾರದಿಂದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಶೂನ್ಯವಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆತಂಕ ಮನೆ ಮಾಡಿದೆ.ಈಗಾಗಲೇ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿದೆ. ಆದರೆ ಒಳಹರಿವು ಝಿರೋ ಆಗಿರುವುದರಿಂದ, ಮುಂದಿನ ಎರಡನೇ ಬೆಳೆಗೆ ನೀರು ಸಿಗುತ್ತಾ,ಇಲ್ಲವಾ? ಎಂಬ ಅನುಮಾನ ರೈತರನ್ನು ಕಾಡುತ್ತಿದೆ.

ಕೊಪ್ಪಳ, (ಸೆಪ್ಟೆಂಬರ್ 17): ನಾಲ್ಕು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತಗೊಂಡಿದೆ. ಕಳೆದ ಒಂದು ವಾರದಿಂದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಶೂನ್ಯವಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆತಂಕ ಮನೆ ಮಾಡಿದೆ.ಈಗಾಗಲೇ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿದೆ. ಆದರೆ ಒಳಹರಿವು ಝಿರೋ ಆಗಿರುವುದರಿಂದ, ಮುಂದಿನ ಎರಡನೇ ಬೆಳೆಗೆ ನೀರು ಸಿಗುತ್ತಾ,ಇಲ್ಲವಾ? ಎಂಬ ಅನುಮಾನ ರೈತರನ್ನು ಕಾಡುತ್ತಿದೆ.

ಹೌದು…ತುಂಗಭದ್ರಾ ಜಲಾಶಯ.ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯನಗರ ನಾಲ್ಕು ಜಿಲ್ಲೆಗಳ ರೈತರ ಪಾಲಿಗೆ ಇದು ಕೇವಲ ಜಲಾಶಯವಲ್ಲ,ಜೀವನಾಡಿ.ಪ್ರತಿ ವರ್ಷ ಜಲಾಶಯದ ನೀರನ್ನೇ ನಂಬಿಕೊಂಡು ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ರೈತರು ಕೃಷಿ ಮಾಡುತ್ತಾರೆ. ಆದರೆ ಈ ಬಾರಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದ್ದು, ಕಳೆದ ಒಂದು ವಾರದಿಂದ ಒಳಹರಿವು ಶೂನ್ಯವಾಗಿದೆ.ಇತ್ತ ಅಚ್ಚುಕಟ್ಟು ಪ್ರದೇಶದಲ್ಲಿ ಈಗಾಗಲೇ ಭತ್ತ ನಾಟಿ ಕಾರ್ಯ ಭರದಿಂದ ಸಾಗಿದೆ.ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ರೈತರು ಭತ್ತ ನಾಟಿ ಮಾಡಿದ್ದಾರೆ.ಬೆಳೆ ಕೈಗೆ ಬರುವ ಹಂತದಲ್ಲಿ ನೀರಿನ ಕೊರತೆ ಎದುರಾದರೆ ಏನು ಮಾಡುವುದು ಎಂಬ ಚಿಂತೆ ರೈತರನ್ನು ಕಾಡುತ್ತಿದೆ.ಒಂದೆಡೆ ಒಳಹರಿವು ಝಿರೋ.ಮತ್ತೊಂದೆಡೆ ಎರಡನೇ ಬೆಳೆಯ ಪ್ರಶ್ನೆ.ಹೀಗಾಗಿ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ದ್ಯ ತುಂಗಭದ್ರಾ ಜಲಾಶಯದಲ್ಲಿ ಸುಮಾರು 83 ಟಿಎಂಸಿ ನೀರು ಸಂಗ್ರಹವಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವಾರ ಮತ್ತೊಮ್ಮೆ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲು ಸಚಿವರು ನಿರ್ಧರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More