ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಗ್ರೇಟ್ ಎಸ್ಕೇಪ್
ಮಂಗಳೂರಿನ ಸುರತ್ಕಲ್ ಕರಾವಳಿಯಲ್ಲಿ ನಾಡ ದೋಣಿಯೊಂದು ಅರಬ್ಬಿ ಸಮುದ್ರದಲ್ಲಿ ಮುಗುಚಿದೆ. ಪ್ರತಿಕೂಲ ಹವಾಮಾನ, ಪ್ರಬಲ ಅಲೆಗಳು ಮತ್ತು ಗಾಳಿಯಿಂದಾಗಿ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಈಜಿ ಸುರಕ್ಷಿತವಾಗಿ ದಡ ಸೇರಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸೂರತ್ಕಲ್ ಪೊಲೀಸರು ತಿಳಿಸಿದ್ದಾರೆ. ಮುಳುಗಿದ ನಾಡ ದೋಣಿ ಇನ್ನೂ ಸಮುದ್ರದಲ್ಲೇ ಉಳಿದಿದೆ ಎಂದು ವರದಿಯಾಗಿದೆ.
ಮಂಗಳೂರು, ಜುಲೈ 17: ಸುರತ್ಕಲ್ ಬಳಿಯ ಅರಬ್ಬಿ ಸಮುದ್ರದಲ್ಲಿ ನಾಡ ದೋಣಿಯೊಂದು ಮಗುಚಿರುವ ಘಟನೆ ವರದಿಯಾಗಿದೆ. ಭಾರೀ ಮಳೆ, ಗಾಳಿ ಮತ್ತು ದೊಡ್ಡ ಅಲೆಗಳಿಂದಾಗಿ ಸಮುದ್ರದಲ್ಲಿ ನೀರಿನ ರಭಸ ಹೆಚ್ಚಿತ್ತು. ಈ ಪ್ರತಿಕೂಲ ಹವಾಮಾನದ ನಡುವೆ ಮೀನುಗಾರಿಕೆಗೆ ತೆರಳಿದ್ದ ನಾಡ ದೋಣಿಯೊಂದು ನಿಯಂತ್ರಣ ತಪ್ಪಿ ಮುಗುಚಿದೆ. ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ನೀರಿಗೆ ಬಿದ್ದರೂ, ಈಜಿ ಸುರಕ್ಷಿತವಾಗಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಸೂರತ್ಕಲ್ ಲೈಟ್ ಹೌಸ್ ಸಮೀಪ ನಡೆದಿದ್ದು, ಯಾವುದೇ ರೀತಿಯ ಸಾವು-ನೋವುಗಳು ಸಂಭವಿಸಿಲ್ಲ. ಸ್ಥಳಕ್ಕೆ ಭೇಟಿ ನೀಡಿರುವ ಸೂರತ್ಕಲ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?

