AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಥಾಣೆಯಲ್ಲಿ ಭೀಕರ ಅಪಘಾತ, ನಾಲ್ವರು ಸಾವು, ಫ್ಲೈಓವರ್​ನಿಂದ ಕೆಳಗೆ ಬಿದ್ದ ವ್ಯಕ್ತಿ

Video: ಥಾಣೆಯಲ್ಲಿ ಭೀಕರ ಅಪಘಾತ, ನಾಲ್ವರು ಸಾವು, ಫ್ಲೈಓವರ್​ನಿಂದ ಕೆಳಗೆ ಬಿದ್ದ ವ್ಯಕ್ತಿ

ನಯನಾ ರಾಜೀವ್
|

Updated on: Nov 22, 2025 | 9:48 AM

Share

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿರುವ ಅಂಬರ್ನಾಥ್ ಫ್ಲೈಓವರ್ ಮೇಲೆ ಭೀಕರ ಅಪಘಾತವೊಂದು ಸಂಭವಿಸಿದೆ. ಟಾಟಾ ನೆಕ್ಸಾನ್ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಹಲವಾರು ಬೈಕ್​ಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಎಷ್ಟು ಭೀಕರವಾಗಿತ್ತೆಂದರೆ, ಕಾರು ಚಾಲಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇತರ ನಾಲ್ವರು ಗಂಭೀರವಾಗಿ ಗಾಯಗೊಂಡರು. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಥಾಣೆ, ನವೆಂಬರ್ 22: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿರುವ ಅಂಬರ್ನಾಥ್ ಫ್ಲೈಓವರ್ ಮೇಲೆ ಭೀಕರ ಅಪಘಾತವೊಂದು ಸಂಭವಿಸಿದೆ. ಟಾಟಾ ನೆಕ್ಸಾನ್ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಹಲವಾರು ಬೈಕ್​ಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಎಷ್ಟು ಭೀಕರವಾಗಿತ್ತೆಂದರೆ, ಕಾರು ಚಾಲಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇತರ ನಾಲ್ವರು ಗಂಭೀರವಾಗಿ ಗಾಯಗೊಂಡರು. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದ ಚೌಬೆ ಅವರ ಪತ್ನಿ ಸುಮನ್ ಚೌಬೆ ಕೂಡ ಗಾಯಗೊಂಡಿದ್ದಾರೆ. ಚಾಲಕನಿಗೆ ಹಠಾತ್ ಹೃದಯಾಘಾತ ಸಂಭವಿಸಿರಬಹುದು ಅಥವಾ ಮದ್ಯದ ನಶೆಯಲ್ಲಿರಬಹುದು ಎಂದು ಅಂದಾಜಿಸಲಾಗಿದೆ. ಫ್ಲೈಓವರ್​ನಿಂದ ಒಬ್ಬರ ದೇಹ ಕೆಳಗೆ ಬಿದ್ದಿರುವುದು ವಿಡಿಯೋದಲ್ಲಿ ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More