Video: ಅಮ್ರೋಹಾ: ನಿಲ್ಲಿಸಿದ್ದ ಟ್ರಕ್​ಗೆ ಕಾರು ಡಿಕ್ಕಿ, ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವು

Updated on: Dec 04, 2025 | 8:51 AM

ಉತ್ತರ ಪ್ರದೇಶದ ಅಮ್ರೋಹಾದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ನಿಲ್ಲಿಸಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ.ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದವರು ಬದುಕುಳಿಯುವ ಯಾವುದೇ ಅವಕಾಶವಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಮ್ರೋಹಾ, ಡಿಸೆಂಬರ್ 04: ಉತ್ತರ ಪ್ರದೇಶದ ಅಮ್ರೋಹಾದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ನಿಲ್ಲಿಸಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ.ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದವರು ಬದುಕುಳಿಯುವ ಯಾವುದೇ ಅವಕಾಶವಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ವಿಧಿವಿಜ್ಞಾನ ತಂಡಗಳು ಮತ್ತು ಪೊಲೀಸ್ ಸಿಬ್ಬಂದಿ ರಾತ್ರಿಯಿಡೀ ಸ್ಥಳದಲ್ಲಿಯೇ ಇತ್ತು.ಮೃತ ನಾಲ್ವರು ವೆಂಕಟೇಶ್ವರ ವಿಶ್ವವಿದ್ಯಾಲಯದ ಎಂಬಿಬಿಎಸ್ ವಿದ್ಯಾರ್ಥಿಗಳು ಎಂದು ಹೇಳಲಾಗುತ್ತಿದೆ. ವಿಶ್ವವಿದ್ಯಾಲಯದ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More