Hubli: ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು; ಅಷ್ಟಕ್ಕೂ ಆಗಿದ್ದೇನು?
ಹುಬ್ಬಳ್ಳಿಯ ಕುಂದಗೋಳ ಕ್ರಾಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಅಂಗಡಿಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಬೆಂಕಿ ಮೊದಲು ಡಾಬಾದಲ್ಲಿ ಕಾಣಿಸಿಕೊಂಡು ಬಳಿಕ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ ಎಂದು ತಿಳಿದುಬಂದಿದ್ದು, ಘಟನೆಯಲ್ಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಬೆಂಕಿಯ ಹೊತ್ತಿಕೊಳ್ಳಲು ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.
ಹುಬ್ಬಳ್ಳಿ, ಡಿಸೆಂಬರ್ 24: ಕುಂದಗೋಳ ಕ್ರಾಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮಾಹಿತಿಗಳ ಪ್ರಕಾರ, ಬೆಂಕಿಯು ಮೊದಲು ಒಂದು ಡಾಬಾದಲ್ಲಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ಹಬ್ಬಿದ ಪರಿಣಾಮ ನಾಲ್ಕು ಶಾಪ್ಗಳು ಅಗ್ನಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 24, 2025 02:48 PM
