ಚಾಮರಾಜನಗರದಲ್ಲೊಂದು ಹೃದಯ ವಿದ್ರಾವಕ ಘಟನೆ: ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು

Edited By:

Updated on: Jun 17, 2026 | 12:11 PM

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲಿಗೌಡನಹಳ್ಳಿಯಲ್ಲಿ ಗ್ರೈಂಡರ್​ನಿಂದ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ನೀರು ತರಲು ಅಡುಗೆ ಮನೆಗೆ ತೆರಳಿದ್ದ ಮಗು ಆನ್ ಆಗಿದ್ದ ಗ್ರೈಂಡರ್ ಮುಟ್ಟಿದ ತಕ್ಷಣ ಸಾವನ್ನಪ್ಪಿದೆ. ಪೋಷಕರ ಎದುರೇ ನಡೆದ ಈ ಹೃದಯ ವಿದ್ರಾವಕ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಚಾಮರಾಜನಗರ, ಜೂನ್​​ 17: ಗುಂಡ್ಲುಪೇಟೆ ತಾಲೂಕಿನ ಕಲಿಗೌಡನಹಳ್ಳಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ ಗ್ರೈಂಡರ್​ನಿಂದ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಪುಟ್ಟಮ್ಮ ಹಾಗೂ ಆನಂದ್ ದಂಪತಿಯ ಪುತ್ರಿ ಅದ್ವಿತಾ ಮೃತಪಟ್ಟ ದುರ್ದೈವಿ. ಮನೆಯಲ್ಲಿ ಆಟವಾಡುತ್ತಿದ್ದ ಅದ್ವಿತಾ ನೀರು ಕುಡಿಯಲು ಅಡುಗೆ ಮನೆಗೆ ತೆರಳಿದ್ದಳು. ಆ ಸಮಯದಲ್ಲಿ ಅಡುಗೆ ಮನೆಯಲ್ಲಿ ಆನ್ ಆಗಿದ್ದ ಗ್ರೈಂಡರ್ ಅನ್ನು ಮುಟ್ಟಿದ್ದಾಳೆ. ಗ್ರೈಂಡರ್ ಅನ್ನು ಮುಟ್ಟಿದ ತಕ್ಷಣವೇ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅದ್ವಿತಾಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 17, 2026 12:10 PM
Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More