Maharashtra Accident: ಬೈಕ್​ಗೆ ಗುದ್ದಿದ ಖಾಸಗಿ ಬಸ್, ನಾಲ್ವರು ಯುವಕರು ಸ್ಥಳದಲ್ಲೇ ಸಾವು

Updated on: May 30, 2026 | 9:36 AM

ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಮನ್ವತ್ ಪಟ್ಟಣದ ಬಳಿ ಶುಕ್ರವಾರ ರಾತ್ರಿ ಪರ್ಭಾನಿಯಿಂದ ಪುಣೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ನಾಲ್ವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೋಟಾರ್ ಸೈಕಲ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರ್ಭಾನಿ-ಪತ್ರಿ ಹೆದ್ದಾರಿಯಲ್ಲಿ ರಾಹುಲ್ ಗಿನ್ನಿಂಗ್ ಬಳಿಯ ಅಂಧರ್ವಾಡ್ ಮಾರುತಿ ದೇವಸ್ಥಾನ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಖಾಸಗಿ ಬಸ್ ಪುಣೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಎದುರುಗಡೆಯಿಂದ ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಪರ್ಭಾನಿ, ಮೇ 30: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಮನ್ವತ್ ಪಟ್ಟಣದ ಬಳಿ ಶುಕ್ರವಾರ ರಾತ್ರಿ ಪರ್ಭಾನಿಯಿಂದ ಪುಣೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ನಾಲ್ವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೋಟಾರ್ ಸೈಕಲ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರ್ಭಾನಿ-ಪತ್ರಿ ಹೆದ್ದಾರಿಯಲ್ಲಿ ರಾಹುಲ್ ಗಿನ್ನಿಂಗ್ ಬಳಿಯ ಅಂಧರ್ವಾಡ್ ಮಾರುತಿ ದೇವಸ್ಥಾನ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಖಾಸಗಿ ಬಸ್ ಪುಣೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಎದುರುಗಡೆಯಿಂದ ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಡಿಕ್ಕಿಯು ಆ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿತ್ತು, ಜೋರಾದ ಡಿಕ್ಕಿ ಶಬ್ದ ಕೇಳಿದ ನಂತರ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದರು. ಡಿಕ್ಕಿಯ ರಭಸಕ್ಕೆ ಸವಾರರು ಬೈಕ್​ನಿಂದ ಕೆಳಗೆ ಬಿದ್ದಿದ್ದರು, ಮಾರಣಾಂತಿಕ ಗಾಯಗಳಾಗಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More