HS Doreswamy Death: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ನಿಧನ
ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ನಿಧನ

HS Doreswamy Death: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ನಿಧನ

|

Updated on: May 26, 2021 | 2:47 PM

HS Doreswamy: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ನಿಧನ - ಜಯದೇವ ಆಸ್ಪತ್ರೆಯಲ್ಲಿ H.S.ದೊರೆಸ್ವಾಮಿ(104) ನಿಧನ - ಇತ್ತೀಚೆಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರು

ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ (104) ಬುಧವಾರ ನಗರದಲ್ಲಿ ಹೃದಯಾಘಾತದಿಂದ ನಿಧನರಾದರು. ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದ ದೊರೆಸ್ವಾಮಿ ಅವರಿಗೆ ಬಳಲಿಕೆ ಇತ್ತು. ಮತ್ತೆ ಅಸ್ವಸ್ಥರಾದ ಕಾರಣ ಕೆಲ ದಿನಗಳ ಹಿಂದೆ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ತಿಂಗಳಲ್ಲಿ 104ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು.

ಎಚ್​.ಎಸ್.ದೊರೆಸ್ವಾಮಿ ಅವರ ಪೂರ್ತಿ ಹೆಸರು ಹಾರೊಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ. ಏಪ್ರಿಲ್ 10, 1918ರಲ್ಲಿ ಜನಿಸಿದ್ದ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಬ್ರಿಟಿಷರ ಕಾಲದಲ್ಲಿ ಕನ್ನಡದದ ಜನಪ್ರಿಯ ಪತ್ರಿಕೆ ಎನಿಸಿದ್ದ ‘ಪೌರವಾಣಿ’ ವರದಿಗಾರರಾಗಿ ಜನಪ್ರಿಯರಾಗಿದ್ದರು. ಸಾಹಿತ್ಯ ಮಂದಿರದ ಮೂಲಕ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದರು. ಇತಿಹಾಸಕಾರ ರಾಮಚಂದ್ರ ಗುಹಾ ಅವರು ದೊರೆಸ್ವಾಮಿ ಅವರನ್ನು ಗೌರವಿಸುತ್ತಿದ್ದರು. ‘ದೊರೆಸ್ವಾಮಿ ಅಂದ್ರೆ ಕರ್ನಾಟಕದ ಸಾಕ್ಷಿಪ್ರಜ್ಞೆ’ ಎಂದು ಗುಹಾ ಬಣ್ಣಿಸಿದ್ದರು.

ಅಂದಿನ ಮೈಸೂರು ಪ್ರಾಂತ್ಯದಲ್ಲಿದ್ದ ಕನಕಪುರ ತಾಲ್ಲೂಕು ಹಾರೋಹಳ್ಳಿ ದೊರೆಸ್ವಾಮಿ ಅವರ ಜನ್ಮಸ್ಥಳ. ಕೇವಲ 5 ವರ್ಷದವರಿದ್ದಾಗ ತಮ್ಮ ತಂದೆ-ತಾಯಿಯನ್ನು ಕಳೆದುಕೊಂಡರು. ತಾತ ಶ್ಯಾನುಭೋಗ ಶಾಮಣ್ಣ ಅವರ ಪಾಲನೆಯಲ್ಲಿ ದೊರೆಸ್ವಾಮಿ ದೊಡ್ಡವರಾದರು. ದೊರೆಸ್ವಾಮಿ ಅವರ ಅಣ್ಣ ಸೀತಾರಾಮ್ ಬೆಂಗಳೂರಿನ ಮೇಯರ್ ಆಗಿದ್ದರು.
(Freedom Fighter HS Doreswamy (104) Passes Away Due To Cardiac Arrest At Jayadeva Hospital In Bengaluru)

ಸರ್ಕಾರದ ಮೊಂಡುತನ ಹೆಚ್ಚು ದಿನ ನಡೆಯದು: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ

Published on: May 26, 2021 02:39 PM