AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡುಬಿದ್ರೆ ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​

ಮೂಡುಬಿದ್ರೆ ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Mar 17, 2026 | 6:25 PM

Share

ಮೂಡುಬಿದ್ರೆ ಇನ್ಸ್ಪೆಕ್ಟರ್ ಸಂದೇಶ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿವೆ. ಮಹಿಳೆಯರೊಂದಿಗೆ ಸಂಭಾಷಿಸುವ ಆಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತನಿಖೆಗೆ ಆದೇಶಿಸಿದ್ದಾರೆ. ಸಂದೇಶ್‌ ಆರೋಪಗಳನ್ನು ನಿರಾಕರಿಸಿದ್ದು, ಆತ್ಮಹತ್ಯೆ ಯತ್ನ ತಡೆಯಲು ಕಾಂಪೌಂಡ್ ಹಾರಿದ್ದಾಗಿ ಹೇಳಿಕೆ ನೀಡಿದ್ದಾರೆ.

ಮಂಗಳೂರು, ಮಾರ್ಚ್​​ 17: ಮೂಡುಬಿದ್ರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿರುವ ನಡುವೆ, ಇನ್ಸ್ಪೆಕ್ಟರ್ ಮಹಿಳೆಯೊಂದಿಗೆ ಮಾತನಾಡಿರುವ ಆಡಿಯೋ ಸಂಭಾಷಣೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾನು ಆಕೆಯ ಟಚ್ ಬಿಟ್ಟಿದ್ದೀನಿ, ದೇವರಾಣೆ ನೀನು ಬಿಟ್ರೆ ನನಗೆ ಯಾರೂ ಬೇಡ ಎಂಬಂತಹ ಪದಗಳು ಆಡಿಯೋದಲ್ಲಿದ್ದು, ನೂರಾರು ಮಹಿಳೆಯರಿಗೆ ಸಂದೇಶ್​​ ಕಿರುಕುಳ ನೀಡಿದ್ದಾರೆ ಎಂಬ ಸಂತ್ರಸ್ತೆಯ ಆರೋಪಗಳಿಗೆ ಇಂಬು ನೀಡುವಂತವೆ. ಹಳೆಯಂಗಡಿಯವಳು ಯಾರು ಅಂತಾ ಮಹಿಳೆ ಸಂದೇಶ್​​ರನ್ನು ತರಾಟೆಗೆ ಪಡೆದಿದ್ದು, ಟೀಚರ್ ಜೊತೆ ಏನು ಸಂಬಂಧ ಮತ್ತು ಮನೆ ಕೆಲಸದವಳ ಜೊತೆ ಏನು ನಡೀತಿದೆ ಅಂತಲೂ ಪ್ರಶ್ನಿಸಿರೋದು ಆಡಿಯೋದಲ್ಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More