ಕಾಶ್ಮೀರದ ಗುಲ್ಮಾರ್ಗ್ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಕಾಶ್ಮೀರದ ಹಲವೆಡೆ ಕಳೆದೊಂದು ವಾರದಿಂದ ಹಿಮಪಾತವಾಗುತ್ತಿದೆ. ಇದರಿಂದಾಗಿ ಪ್ರವಾಸಿಗರ ಸಂಖ್ಯೆ ಕೂಡ ಹೆಚ್ಚಾಗಿದೆ. ಕಾಶ್ಮೀರದಲ್ಲಿ ಹಿಮದಿಂದ ಆವೃತವಾದ ಪರ್ವತಗಳು ಮತ್ತು ಪ್ರಕಾಶಮಾನವಾದ ಸೂರ್ಯನನ್ನು ಆನಂದಿಸಲು ಭಾರತದಾದ್ಯಂತ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಗುಲ್ಮಾರ್ಗ್‌ಗೆ ಭೇಟಿ ನೀಡಿದ್ದಾರೆ. ಪ್ರವಾಸಿಗರು ಹಿಮಪಾತವನ್ನು ಎಂಜಾಯ್ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ.
ಶ್ರೀನಗರ: ಕಾಶ್ಮೀರದ ಮೇಲ್ಭಾಗದಲ್ಲಿ ತಾಜಾ ಹಿಮಪಾತವು ಪ್ರವಾಸಿಗರನ್ನು ಸೆಳೆಯುತ್ತಿದೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮದಿಂದ ಆವೃತವಾದ ಪರ್ವತಗಳು ಮತ್ತು ಪ್ರಕಾಶಮಾನವಾದ ಸೂರ್ಯನ ಬೆಳಕನ್ನು ಆನಂದಿಸಲು ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಭಾರತದಾದ್ಯಂತದ ಪ್ರವಾಸಿಗರು ಗುಲ್ಮಾರ್ಗ್‌ಗೆ ಬರುತ್ತಿದ್ದಾರೆ. ಉತ್ತರ ಪ್ರದೇಶದಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಗುಲ್ಮಾರ್ಗ್‌ಗೆ ಆಗಮಿಸಿ ಹಿಮಪಾತವನ್ನು ಆನಂದಿಸಿದ್ದಾರೆ. ಗುಲ್ಮಾರ್ಗ್ 8,000 ಅಡಿ ಎತ್ತರದಲ್ಲಿದೆ. ಇದು ಬೇಸಿಗೆಯ ರಾಜಧಾನಿ ಶ್ರೀನಗರದಿಂದ 50 ಕಿ.ಮೀ ಉತ್ತರದಲ್ಲಿದೆ. ಈ ಸ್ಥಳವನ್ನು ‘ಏಷ್ಯಾದ ಸ್ವಿಟ್ಜರ್ಲೆಂಡ್’ ಎಂದೂ ಕರೆಯುತ್ತಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

ವಿನಯ್ರೊಂದಿಗೆ ನಾನು ಒಮ್ಮೆಯೂ ಮಾತಾಡಿಲ್ಲ, ಕಿರುಕುಳ ಎಲ್ಲಿಂದ ಬಂತು?: ಶಾಸಕ

ವಿನಯ್ ಸಾವಿಗೆ ಕಾರಣರಾದ ಎಸ್ಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು: ಅಶೋಕ

ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್ಪಿ

‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ
