ಅಕ್ಟೋಬರ್​ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡ್ತೀವಿ: ಸಚಿವ KH ಮುನಿಯಪ್ಪ

ಮಹೇಶ್ ಇ, ಭೂಮನಹಳ್ಳಿ Edited By:

Updated on: Sep 24, 2023 | 11:00 PM

ಅಕ್ಟೋಬರ್​ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ K.H.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದು ತಿಳಿಸಿದರು.

ತುಮಕೂರು, ಸೆಪ್ಟೆಂಬರ್​ 24: ಅಕ್ಟೋಬರ್​ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ K.H.ಮುನಿಯಪ್ಪ (KH Muniyappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದು ತಿಳಿಸಿದರು. ಈಗಾಗಲೇ 100 ದಿನಗಳಲ್ಲಿ 4 ಗ್ಯಾರಂಟಿ‌ಗಳನ್ನು ಜಾರಿ ಮಾಡಿದ್ದೇವೆ. ಡಿಸೆಂಬರ್ ಬಳಿಕ 5ನೇ ಗ್ಯಾರಂಟಿ ಕೂಡ ನಾವು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...