Video: ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಇಂದು ಅಹಮದಾಬಾದಿನಲ್ಲಿರುವ ಸಬರಮತಿ ಆಶ್ರಮದಲ್ಲಿ ನಡೆಯುತ್ತಿರುವ ಗಾಳಿಪಟ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜರ್ಮನ್ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರೊಂದಿಗೆ ಗಾಳಿಪಟ ಹಾರಿಸಿದರು. ಆಶ್ರಮಕ್ಕೆ ಆಗಮಿಸಿದ ನಂತರ, ಇಬ್ಬರೂ ನಾಯಕರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಪುಷ್ಪ ನಮನ ಸಲ್ಲಿಸಿದರು. ಮೆರ್ಜ್ ಅಲ್ಲಿನ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದರು. ನಂತರ ಇಬ್ಬರೂ ನಾಯಕರು ಸಬರಮತಿ ನದಿ ದಂಡೆಯಲ್ಲಿ ನಡೆದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ 2026 ರಲ್ಲಿ ಭಾಗವಹಿಸಿದ್ದಾರೆ.
ಅಹಮದಾಬಾದ್, ಜನವರಿ 12: ಪ್ರಧಾನಿ ನರೇಂದ್ರ ಮೋದಿ ಇಂದು ಅಹಮದಾಬಾದಿನಲ್ಲಿರುವ ಸಬರಮತಿ ಆಶ್ರಮದಲ್ಲಿ ನಡೆಯುತ್ತಿರುವ ಗಾಳಿಪಟ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜರ್ಮನ್ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರೊಂದಿಗೆ ಗಾಳಿಪಟ ಹಾರಿಸಿದರು. ಆಶ್ರಮಕ್ಕೆ ಆಗಮಿಸಿದ ನಂತರ, ಇಬ್ಬರೂ ನಾಯಕರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಪುಷ್ಪ ನಮನ ಸಲ್ಲಿಸಿದರು. ಮೆರ್ಜ್ ಅಲ್ಲಿನ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದರು. ನಂತರ ಇಬ್ಬರೂ ನಾಯಕರು ಸಬರಮತಿ ನದಿ ದಂಡೆಯಲ್ಲಿ ನಡೆದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ 2026 ರಲ್ಲಿ ಭಾಗವಹಿಸಿದ್ದಾರೆ.
ಗುಜರಾತ್‌ನ ಗೌರವಾನ್ವಿತ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು .ಭಾರತ ಮತ್ತು ಜರ್ಮನಿ ಭಾರತ-ಜರ್ಮನಿ ರಾಜತಾಂತ್ರಿಕ ಸಂಬಂಧಗಳ 75 ವರ್ಷಗಳನ್ನು ಮತ್ತು ಭಾರತ-ಜರ್ಮನಿ ಕಾರ್ಯತಂತ್ರದ ಪಾಲುದಾರಿಕೆಯ 25 ವರ್ಷಗಳನ್ನು ಆಚರಿಸುತ್ತಿವೆ. ಈ ನಿಟ್ಟಿನಲ್ಲಿ ಮೆರ್ಜ್ ಭಾರತಕ್ಕೆ ಭೇಟಿ ನೀಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

