AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್‌ಗಳ ಮೇಲೆ ದಾಳಿ ಮುಂದುವರಿಕೆ, ಎಫ್​ಎಸ್​ಎಸ್​ಎಐ ಕಠಿಣ ಕ್ರಮ

ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್‌ಗಳ ಮೇಲೆ ದಾಳಿ ಮುಂದುವರಿಕೆ, ಎಫ್​ಎಸ್​ಎಸ್​ಎಐ ಕಠಿಣ ಕ್ರಮ

ಗಣಪತಿ ಶರ್ಮಾ
|

Updated on: Oct 17, 2026 | 11:41 AM

Share

ದಸರಾ ಹಬ್ಬದ ಹಿನ್ನೆಲೆಯಲ್ಲಿ, FSSAI ಅಧಿಕಾರಿಗಳು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ. 90 ಸ್ಥಳಗಳಲ್ಲಿ ಪರಿಶೀಲನೆ ನಡೆಸಿ 145 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಶುಚಿತ್ವದ ಕೊರತೆ, ಸಿಬ್ಬಂದಿಗೆ ವೈದ್ಯಕೀಯ ಪ್ರಮಾಣಪತ್ರ ಇಲ್ಲದಿರುವುದು ಮತ್ತು ಲೇಬಲಿಂಗ್ ದೋಷಗಳಿಗಾಗಿ 15 ಘಟಕಗಳಿಗೆ ನೋಟಿಸ್ ನೀಡಲಾಗಿದೆ.

ಬೆಂಗಳೂರು, ಅಕ್ಟೋಬರ್ 17: ದಸರಾ ಹಬ್ಬದ ಸಿದ್ಧತೆಯ ನಡುವೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸ್ವೀಟ್ ಅಂಗಡಿಗಳ ಮೇಲೆ ಬಿಗ್ ಶಾಕ್ ನೀಡಿದೆ. ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ದಾಳಿ ಮುಂದುವರೆಸಿದ್ದು, ಗುಣಮಟ್ಟ ಮತ್ತು ನೈರ್ಮಲ್ಯವನ್ನು ಪರಿಶೀಲಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಒಟ್ಟು 90 ಕಡೆಗಳಲ್ಲಿ ದಾಳಿ ನಡೆಸಿ, ಎಫ್​ಎಸ್​ಎಸ್​ಎಐ ಅಧಿಕಾರಿಗಳು ಕೂಲಂಕಷ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 145 ವಿವಿಧ ಮಾದರಿಯ ಸ್ವೀಟ್ಸ್ ಸ್ಯಾಂಪಲ್ಸ್‌ಗಳನ್ನು ಸಂಗ್ರಹಿಸಲಾಗಿದೆ.

ಸ್ವೀಟ್ ತಯಾರಿಕಾ ಘಟಕಗಳಲ್ಲಿ ಶುಚಿತ್ವ ಕಾಪಾಡದಿರುವುದು, ಸಿಬ್ಬಂದಿಗೆ ಕಡ್ಡಾಯವಾಗಿ ಇರಬೇಕಾದ ವೈದ್ಯಕೀಯ ಪ್ರಮಾಣಪತ್ರ ಇಲ್ಲದಿರುವುದು ಮತ್ತು ಉತ್ಪನ್ನಗಳ ಲೇಬಲಿಂಗ್‌ನಲ್ಲಿ ದೋಷಗಳು ದಾಳಿಯ ಸಂದರ್ಭದಲ್ಲಿ ಕಂಡುಬಂದಿವೆ. ಈ ಗಂಭೀರ ಲೋಪಗಳನ್ನು ಗಮನಿಸಿ, 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್ ನೀಡಲಾಗಿದೆ. ಅಲ್ಲದೆ, ಎರಡು ಉದ್ದಿಮೆಗಳಿಗೆ 7,000 ರೂಪಾಯಿ ದಂಡವನ್ನು ಕೂಡ ಅಧಿಕಾರಿಗಳು ವಿಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಬಸವೇಶ್ವರ ರಾಜಸ್ಥಾನ ಸ್ವೀಟ್ ಮಳಿಗೆಯ ಮೇಲೂ ಎಫ್​ಎಸ್​ಎಸ್​ಎಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಶುದ್ಧ ಮತ್ತು ಗುಣಮಟ್ಟದ ಸ್ವೀಟ್‌ಗಳು ದೊರೆಯುವಂತೆ ನೋಡಿಕೊಳ್ಳುವುದು ಈ ವಿಶೇಷ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More