ಬೆಳಗಾವಿಯಲ್ಲಿ ಪೆಟ್ರೋಲ್, ಡಿಸೇಲ್ ಅಭಾವ? ಬಂಕ್ಗಳಿಗೆ ಏಕಾಏಕಿ ಮುಗಿಬಿದ್ದ ಜನ
ಬೆಳಗಾವಿಯಲ್ಲಿ ನಾಲ್ಕು ದಿನಗಳ ಕಾಲ ಪೆಟ್ರೋಲ್ ಸಿಗುವುದಿಲ್ಲ ಎಂಬ ಸಾಮಾಜಿಕ ಜಾಲತಾಣದ ವದಂತಿಯ ಪರಿಣಾಮ ಇಂಧನ ಬಂಕ್‌ಗಳಲ್ಲಿ ಭಾರೀ ನೂಕುನುಗ್ಗಲು ಉಂಟಾಗಿದೆ. ವಾಹನ ಸವಾರರು ಬಾಟಲಿಗಳಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುತ್ತಿದ್ದು, ಅಜಮ್ ನಗರ, ಕೊಲ್ಲಾಪುರ ಸರ್ಕಲ್ ಸೇರಿದಂತೆ ಹಲವೆಡೆ ಜನಸಾಗರ ಕಂಡುಬಂತು. ಬಂಕ್ ಸಿಬ್ಬಂದಿ ಜನರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.
ಬೆಳಗಾವಿ, ಮಾರ್ಚ್ 24: ಬೆಳಗಾವಿ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ಗಾಗಿ ಭಾರೀ ಜನಸಂದಣಿ ಕಂಡುಬಂದಿದೆ. ‘ನಾಲ್ಕು ದಿನಗಳ ಕಾಲ ಪೆಟ್ರೋಲ್ ಸಿಗುವುದಿಲ್ಲ’ ಎಂಬ ವದಂತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದರಿಂದ ಜನತೆ ಭಯಭೀತರಾಗಿ ಇಂಧನ ಬಂಕ್‌ಗಳತ್ತ ಧಾವಿಸಿದರು. ಅಜಮ್ ನಗರ, ಕೊಲ್ಲಾಪುರ ಸರ್ಕಲ್, ನೆಹರು ನಗರ, ವೈಭವ ನಗರ, ಮತ್ತು ಗಾಂಧಿನಗರದಂತಹ ಪ್ರಮುಖ ಬಂಕ್‌ಗಳಲ್ಲಿ ವಾಹನ ಸವಾರರು ಮುಗಿಬಿದ್ದರು. ಜನರು ತಮ್ಮ ವಾಹನಗಳಿಗೆ ಇಂಧನ ತುಂಬಿಸಿಕೊಳ್ಳುವುದರ ಜೊತೆಗೆ ಬಾಟಲಿಗಳು ಮತ್ತು ಆಯಿಲ್ ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುತ್ತಿರುವುದು ಕಂಡುಬಂದಿದೆ. ಏಕಾಏಕಿ ದೊಡ್ಡ ಸಂಖ್ಯೆಯಲ್ಲಿ ಜನ ನೆರೆದಿದ್ದರಿಂದ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಪರಿಸ್ಥಿತಿಯನ್ನು ನಿಯಂತ್ರಿಸಲು ಕಷ್ಟವಾಯಿತು. ಕೆಲವೆಡೆ ಪೊಲೀಸರ ನೆರವು ಪಡೆಯಬೇಕಾಯಿತು. ಹಲವು ಬಂಕ್‌ಗಳಲ್ಲಿ ಇಂಧನದ ಕೊರತೆಯ ವದಂತಿ ಮತ್ತಷ್ಟು ಆತಂಕ ಸೃಷ್ಟಿಸಿತು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಯಿತು.
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

