ಬೆಳಗಾವಿಯಲ್ಲಿ ಪೆಟ್ರೋಲ್, ಡಿಸೇಲ್ ಅಭಾವ? ಬಂಕ್​ಗಳಿಗೆ ಏಕಾಏಕಿ ಮುಗಿಬಿದ್ದ ಜನ

Edited By:

Updated on: Mar 24, 2026 | 10:06 AM

ಬೆಳಗಾವಿಯಲ್ಲಿ ನಾಲ್ಕು ದಿನಗಳ ಕಾಲ ಪೆಟ್ರೋಲ್ ಸಿಗುವುದಿಲ್ಲ ಎಂಬ ಸಾಮಾಜಿಕ ಜಾಲತಾಣದ ವದಂತಿಯ ಪರಿಣಾಮ ಇಂಧನ ಬಂಕ್‌ಗಳಲ್ಲಿ ಭಾರೀ ನೂಕುನುಗ್ಗಲು ಉಂಟಾಗಿದೆ. ವಾಹನ ಸವಾರರು ಬಾಟಲಿಗಳಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುತ್ತಿದ್ದು, ಅಜಮ್ ನಗರ, ಕೊಲ್ಲಾಪುರ ಸರ್ಕಲ್ ಸೇರಿದಂತೆ ಹಲವೆಡೆ ಜನಸಾಗರ ಕಂಡುಬಂತು. ಬಂಕ್ ಸಿಬ್ಬಂದಿ ಜನರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.

ಬೆಳಗಾವಿ, ಮಾರ್ಚ್ 24: ಬೆಳಗಾವಿ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ಗಾಗಿ ಭಾರೀ ಜನಸಂದಣಿ ಕಂಡುಬಂದಿದೆ. ‘ನಾಲ್ಕು ದಿನಗಳ ಕಾಲ ಪೆಟ್ರೋಲ್ ಸಿಗುವುದಿಲ್ಲ’ ಎಂಬ ವದಂತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದರಿಂದ ಜನತೆ ಭಯಭೀತರಾಗಿ ಇಂಧನ ಬಂಕ್‌ಗಳತ್ತ ಧಾವಿಸಿದರು. ಅಜಮ್ ನಗರ, ಕೊಲ್ಲಾಪುರ ಸರ್ಕಲ್, ನೆಹರು ನಗರ, ವೈಭವ ನಗರ, ಮತ್ತು ಗಾಂಧಿನಗರದಂತಹ ಪ್ರಮುಖ ಬಂಕ್‌ಗಳಲ್ಲಿ ವಾಹನ ಸವಾರರು ಮುಗಿಬಿದ್ದರು. ಜನರು ತಮ್ಮ ವಾಹನಗಳಿಗೆ ಇಂಧನ ತುಂಬಿಸಿಕೊಳ್ಳುವುದರ ಜೊತೆಗೆ ಬಾಟಲಿಗಳು ಮತ್ತು ಆಯಿಲ್ ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುತ್ತಿರುವುದು ಕಂಡುಬಂದಿದೆ. ಏಕಾಏಕಿ ದೊಡ್ಡ ಸಂಖ್ಯೆಯಲ್ಲಿ ಜನ ನೆರೆದಿದ್ದರಿಂದ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಪರಿಸ್ಥಿತಿಯನ್ನು ನಿಯಂತ್ರಿಸಲು ಕಷ್ಟವಾಯಿತು. ಕೆಲವೆಡೆ ಪೊಲೀಸರ ನೆರವು ಪಡೆಯಬೇಕಾಯಿತು. ಹಲವು ಬಂಕ್‌ಗಳಲ್ಲಿ ಇಂಧನದ ಕೊರತೆಯ ವದಂತಿ ಮತ್ತಷ್ಟು ಆತಂಕ ಸೃಷ್ಟಿಸಿತು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 24, 2026 10:05 AM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More