ಗ್ಯಾಸ್ ಟ್ರಬಲ್ ಆಯ್ತು, ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!

Updated on: Mar 25, 2026 | 11:27 AM

ಕರ್ನಾಟಕದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಉಂಟಾಗುವ ಭೀತಿ ಎದುರಾಗಿದೆ. ಭಾರತ್ ಪೆಟ್ರೋಲಿಯಂ ಲಿಮಿಟೆಡ್ ಮುಂಗಡ ಹಣ ಪಡೆದರೂ ಇಂಧನ ಪೂರೈಸುತ್ತಿಲ್ಲ ಎಂದು ಅಖಿಲ ಕರ್ನಾಟಕ ಫೆಡರೇಶನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ ಎಚ್ಚರಿಸಿದೆ. ಗ್ರಾಮೀಣ ಭಾಗಗಳಲ್ಲಿ ಆರಂಭವಾಗಿರುವ ಈ ಸಮಸ್ಯೆ ನಗರಗಳಿಗೂ ವಿಸ್ತರಿಸುವ ಸಾಧ್ಯತೆಯಿದ್ದು, ಸಚಿವ ಕೆ.ಹೆಚ್. ಮುನಿಯಪ್ಪ ಅವರ ಮಧ್ಯ ಪ್ರವೇಶಕ್ಕೆ ಮನವಿ ಮಾಡಲಾಗಿದೆ.

ಬೆಂಗಳೂರು, ಮಾರ್ಚ್ 25: ಭಾರತ್ ಪೆಟ್ರೋಲಿಯಂ ಲಿಮಿಟೆಡ್‌ನಿಂದ ಇಂಧನ ಪೂರೈಕೆ ಸ್ಥಗಿತಗೊಂಡಿರುವುದರಿಂದ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗುವ ಆತಂಕ ಎದುರಾಗಿದೆ. ಅಖಿಲ ಕರ್ನಾಟಕ ಫೆಡರೇಶನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ ಈ ಕುರಿತು ಎಚ್ಚರಿಕೆ ನೀಡಿದೆ. ಕಂಪನಿಯು ಮುಂಗಡ ಹಣ ಪಡೆದಿದ್ದರೂ ಲೋಡ್ ನೀಡುತ್ತಿಲ್ಲ ಎಂದು ಫೆಡರೇಶನ್ ತಿಳಿಸಿದೆ. ಈ ಸಮಸ್ಯೆ ಪ್ರಸ್ತುತ ಬೆಂಗಳೂರು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಾದ ಆನೇಕಲ್, ಕೋಲಾರ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ಭಾಗಗಳಲ್ಲಿ ಕಂಡುಬಂದಿದೆ. ಇದು ಮುಂದಿನ ದಿನಗಳಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ. ಹೆಚ್‌ಪಿಸಿ ಮತ್ತು ಐಓಸಿ ಕೂಡ ಇದೇ ಹಾದಿ ಹಿಡಿದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದು ಎಂದು ಫೆಡರೇಶನ್ ಆತಂಕ ವ್ಯಕ್ತಪಡಿಸಿದೆ. ಕೂಡಲೇ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಮಧ್ಯ ಪ್ರವೇಶಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಅಖಿಲ ಕರ್ನಾಟಕ ಫೆಡರೇಶನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ ಮನವಿ ಮಾಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 25, 2026 11:25 AM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More