Belagavi: ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವುದು ನಿಜವಾದರೂ ವಿಳಂಬಿತ ಮಾನ್ಸೂನ್​ನಿಂದ ಆತಂಕದಲ್ಲಿ ಬೆಳಗಾವಿಯ ಅನ್ನದಾತ!

ಅರುಣ್​ ಕುಮಾರ್​ ಬೆಳ್ಳಿ

Updated on: Jul 19, 2023 | 12:44 PM

ಉಕ್ಕಿ ಹರಿಯುತ್ತಿರುವ ಮಲಪ್ರಭೆ ಜಿಲ್ಲೆಯಲ್ಲಿ ಕೃಷಿಗೆ ಸಂಬಂಧಿಸಿದ ನೈಜ ಚಿತ್ರಣವನ್ನು ನೀಡದು.

ಬೆಳಗಾವಿ: ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ (Kalyana Karnataka) ಪ್ರಾಂತ್ಯಗಳಲ್ಲಿ ವಿಳಂಬಗೊಂಡಿದ್ದ ಮಾನ್ಸೂನ್ ಮಳೆ ಈಗ ಸುರಿಯಲಾರಂಭಿಸಿದೆ. ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹೆಬ್ಬಾನಟ್ಟಿ ಮೂಲಕ ಹರಯುವ ಮಲಪ್ರಭಾ ನದಿ (Malaprabha River) ಉಕ್ಕಿ ಹರಿಯುತ್ತಿರುವುದನ್ನು ಕಂಡು ಪ್ರದೇಶಗಳಲ್ಲಿ ಜೋರು ಮಳೆಯಾಗುತ್ತಿದೆ ಅಂತ ಭಾವಿಸಬೇಡಿ. ಪಶ್ಚಿಮ ಘಟ್ಟ ಪ್ರದೇಶದಲ್ಲಿ (Western Ghats region) ಮಳೆ ಧಾರಾಕಾರವಾಗಿ ಸುರಿಯುತ್ತಿರುವುದರಿಂದ ಮಲಪ್ರಭೆಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ನದಿ ಉಕ್ಕಿ ಹರಿಯುತ್ತಿರುವುದರಿಂದ ಹೆಬ್ಬಾನಟ್ಟಿ ಗ್ರಾಮದಲ್ಲ್ಲಿರುವ ಮಾರುತಿ ಮಂದಿರ ಮತ್ತು ರಾಮಮಂದಿರಗಳು ಮುಕ್ಕಾಲು ಭಾಗದಷ್ಟು ಮುಳುಗಡೆಯಾಗಿವೆ. ಬೆಳಗಾವಿ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಕುಂಠಿತಗೊಂಡಿದೆ ಮತ್ತು ರೈತರು ಬರಗಾಲ ಎದುರಿಸುವ ಆತಂಕದಲ್ಲಿದ್ದಾರೆ. ಜಿಲ್ಲಾ ಕೃಷಿ ಇಲಾಖೆ ಮೂಲಗಳ ಪ್ರಕಾರ ಇದುವರೆಗೆ ಶೇಕಡ 65 ರಷ್ಟು ಮಾತ್ರ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಉಕ್ಕಿ ಹರಿಯುತ್ತಿರುವ ಮಲಪ್ರಭೆ ಜಿಲ್ಲೆಯಲ್ಲಿ ಕೃಷಿಗೆ ಸಂಬಂಧಿಸಿದ ನೈಜ ಚಿತ್ರಣವನ್ನು ನೀಡದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.