ದರ್ಶನ್​ ಬರಮಾಡಿಕೊಳ್ಳಲು ಬಳ್ಳಾರಿ ಸೆಂಟ್ರಲ್​ ಜೈಲಿನಲ್ಲಿ ಹೇಗೆಲ್ಲಾ ಸಿದ್ಧತೆಗಳು ನಡೆದಿವೆ ನೋಡಿ

ದರ್ಶನ್​ ಬರಮಾಡಿಕೊಳ್ಳಲು ಬಳ್ಳಾರಿ ಸೆಂಟ್ರಲ್​ ಜೈಲಿನಲ್ಲಿ ಹೇಗೆಲ್ಲಾ ಸಿದ್ಧತೆಗಳು ನಡೆದಿವೆ ನೋಡಿ

ರಮೇಶ್ ಬಿ. ಜವಳಗೇರಾ
|

Updated on: Aug 27, 2024 | 7:46 PM

ಬೆಂಗಳೂರಿನ ಪರಪ್ಪರ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ಹಿನ್ನೆಲೆಯಲ್ಲಿ ನಟ ದರ್ಶನ್​ನನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಇದಕ್ಕೆ ಕೋರ್ಟ್ ಸಹ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ದಾಸನನ್ನು ಬರಮಾಡಿಕೊಳ್ಳಲು ಬಳ್ಳಾರಿ ಸೆಂಟ್ರಲ್​ ಜೈಲಿನಲ್ಲಿ ಭರದ ಸಿದ್ಧತೆಗಳು ನಡೆದಿವೆ.

ಬಳ್ಳಾರಿ, (ಆಗಸ್ಟ್ 27): ಬೆಂಗಳೂರಿನ ಪರಪ್ಪರ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರ ಸಿಗರೇಟ್ ಪಾರ್ಟಿ ಫೋಟೋ ವೈರಲ್ ಆದ ಬೆನ್ನಲ್ಲೇ ನಟ ದರ್ಶನ್​ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಿ 24ನೇ ಎಸಿಎಂಎಂ ಕೋರ್ಟ್​ ಆದೇಶ ನೀಡಿದೆ. ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲಿನಲ್ಲಿರುವ ದರ್ಶನ್ ಅವರನ್ನು ಸದ್ಯ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ. ಇವರಷ್ಟೇ ಅಲ್ಲದೇ ದರ್ಶನ್ ಗ್ಯಾಂಗ್​ನ ಇತರೆ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪ್ರಕರಣದಲ್ಲಿ ದರ್ಶನ್ ಸೇರಿ ಇತರ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮನವಿ ಮಾಡಿದ್ದರು. ಈ ಮನವಿಯನ್ನು ವಿಚಾರಣೆ ಮಾಡಿದ ಕೋರ್ಟ್ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಿ ಆದೇಶ ಹೊರಡಿಸಿದೆ.

ಕೋರ್ಟ್ ಆದೇಶ ಹಿನ್ನೆಲೆ ಇತ್ತ ಅಲರ್ಟ್ ಆದ ಬಳ್ಳಾರಿ ಜೈಲು ಅಧಿಕಾರಿಗಳು, ಜೈಲಿನ ವಿಐಪಿ ಸೆಲ್​ಗಳ ಅಂತಿಮ ಹಂತದ ಪರಿಶೀಲನೆ ನಡೆಸಿದರು. ಅಲ್ಲದೇ ಜೈಲಿನ ಸಿಸಿ ಕ್ಯಾಮರಾಗಳನ್ನು ಸಹ ಪರಿಶೀಲಿಸಿದರು. ಹಾಗೇ ವಿಐಪಿ ಸೆಲ್‌ಗಳ ಅಂತಿಮ ಹಂತದ ಪರಿಶೀಲನೆ ನಡೆಸಿದ್ದು, ಮಧ್ಯರಾತ್ರಿ ದರ್ಶನ್​ನನ್ನು ಜೈಲಿಗೆ ಕರೆ ತರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಜೈಲಿನ ಸುತ್ತ ಫುಲ್​ ಟೈಟ್ ಸೆಕ್ಯೂರಿಟಿ ಇದೆ. ಇನ್ನು ದರ್ಶನ್​ನನ್ನು ಅಟ್ಯಾಚ್ ಬಾತ್​ರೂಮ್ ಇರುವ ಸೆಲ್​ನಲ್ಲಿ ಇರಿಸುವ ಸಾಧ್ಯತೆಗಳಿವೆ.