ಬೆಂಗಳೂರಿನಲ್ಲಿ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್, ವಿಡಿಯೋ ನೋಡಿ
ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾದ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ದಿಢೀರ್ ಕುಸಿದುಬಿದ್ದಿದ್ದು, ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿರುವಾಗಲೇ ಹಳೇ ಚಂದಾಪುರದ ಬಳಿ ರಸ್ತೆ ಸುಮಾರು 20 ಅಡಿ ಆಳಕ್ಕೆ ಕುಸಿದಿದ್ದು, ಚಂದಾಪುರದಿಂದ ಕರ್ನಾಟಕದ ಗಡಿ ಅತ್ತಿಬೆಲೆವರೆಗೆ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಇನ್ನು ರೋಗಿಗಳು, ಶಾಲಾ ಮಕ್ಕಳು ಸಕಾಲಕ್ಕೆ ತಲುಪಲು ಪರದಾಡಿದರು.
ಆನೇಕಲ್ (ಬೆಂಗಳೂರು) (ಫೆಬ್ರವರಿ.04): ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾದ ಬೆಂಗಳೂರು-ಹೊಸೂರು (Bengaluru Hosur Road) ರಾಷ್ಟ್ರೀಯ ಹೆದ್ದಾರಿ ದಿಢೀರ್ ಕುಸಿದುಬಿದ್ದಿದ್ದು, ಫುಲ್ ಟ್ರಾಫಿಕ್ ಜಾಮ್ (traffic jam) ಉಂಟಾಗಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿರುವಾಗಲೇ ಹಳೇ ಚಂದಾಪುರದ ಬಳಿ ರಸ್ತೆ ಸುಮಾರು 20 ಅಡಿ ಆಳಕ್ಕೆ ಕುಸಿದಿದ್ದು, ಚಂದಾಪುರದಿಂದ ಕರ್ನಾಟಕದ ಗಡಿ ಅತ್ತಿಬೆಲೆವರೆಗೆ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಇನ್ನು ರೋಗಿಗಳು, ಶಾಲಾ ಮಕ್ಕಳು ಸಕಾಲಕ್ಕೆ ತಲುಪಲು ಪರದಾಡಿದರು.
ಹಳೇ ಚಂದಾಪುರದ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿದೆ. ಇದೇ ವೇಳೆ ಸಮೀಪದ ಲೇಔಟ್‌ಗಳಿಂದ ಹರಿದು ಬರುತ್ತಿರುವ ಸ್ಯಾನಿಟರಿ ನೀರು ರಸ್ತೆಯ ಅಡಿಭಾಗಕ್ಕೆ ನುಗ್ಗಿದ್ದು, ಮಣ್ಣು ಸಡಿಲಗೊಂಡು ಬೃಹತ್ ಕುಸಿತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
