ಸರಣಿ ಅಪಘಾತ: ಬೆಂಗಳೂರಿನಲ್ಲಿ ನಾಲ್ಕೈದು ಕಿ.ಮೀ ಟ್ರಾಫಿಕ್ ಜಾಮ್..!
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿ-ಸಿಲ್ಕ್ ಬೋರ್ಡ್ ನಡುವಿನ ಎಲಿವೇಟೆಡ್ ಫ್ಲೈಓವರ್ ಮೇಲೆ ಮೂರ್ನಾಲ್ಕು ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇನ್ನು ಈ ಅಪಘಾತದಿಂದಾಗಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರು, (ಫೆಬ್ರವರಿ 06): ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವನ ಸ್ಥೀತಿ ಗಂಭೀರವಾಗಿದೆ. ಎಲೆಕ್ಟ್ರಾನಿಕ್ ಸಿಟಿ-ಸಿಲ್ಕ್ ಬೋರ್ಡ್ ನಡುವಿನ ಎಲಿವೇಟೆಡ್ ಫ್ಲೈಓವರ್ ಮೇಲೆ ಮೂರ್ನಾಲ್ಕು ಕಾರುಗಳ ನಡುವೆ ಡಿಕ್ಕಿಯಾಗಿದೆ. ಇದರಿಂದ ನಾಲ್ಕೈದು ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಫ್ಲೈಓವರ್ ಮೇಲೆಯೇ ಗಂಟೆಗಟ್ಟಲೇ ನಿಂತಲ್ಲೇ ನಿಂತು ವಾಹನ ಸವಾರರು ಪರದಾಡುತ್ತಿದ್ದಾರೆ.
