AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್: ನೈಸ್ ರಸ್ತೆಯಲ್ಲಿ ಕನಿಷ್ಠ ನಾಲ್ಕು ಕಿಲೋಮೀಟರ್ ಟ್ರಾಫಿಕ್ ಜಾಮ್

ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್: ನೈಸ್ ರಸ್ತೆಯಲ್ಲಿ ಕನಿಷ್ಠ ನಾಲ್ಕು ಕಿಲೋಮೀಟರ್ ಟ್ರಾಫಿಕ್ ಜಾಮ್

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 18, 2026 | 3:42 PM

Share

ಮುಖ್ಯಾಂಶಗಳು

  • ಬೆಂಗಳೂರಿನ ನೈಸ್ ರಸ್ತೆಯಲ್ಲಿ ಹೊತ್ತಿ ಉರಿಯುತ್ತಿರುವ ಕೆಮಿಕಲ್ ಟ್ಯಾಂಕರ್
  • ಕನಕಪುರ ರಸ್ತೆ ಟೋಲ್​ನಿಂದ ಅಂಜಾನಪುರ ಕಡೆ ಬರ್ತಿದ್ದ ಟ್ಯಾಂಕರ್
  • ಕನಕಪುರ ರಸ್ತೆಯ ಟೋಲ್ ಬಳಿ ಕನಿಷ್ಠ 4 ಕಿಲೋ ಮೀಟರ್​ವರೆಗೆ ಟ್ರಾಫಿಕ್

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭಾರೀ ಅವಘಡ ಸಂಭವಿಸಿದೆ. ಕನಕಪುರ ರಸ್ತೆಯಲ್ಲಿ ಡೀಸೆಲ್​​ ಟ್ಯಾಂಕರ್ ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಚಿಮ್ಮಿದೆ. ಕನಕಪುರ ರಸ್ತೆ ಟೋಲ್​ನಿಂದ ಅಂಜನಾಪುರ ಕಡೆಗೆ ಬರುವಾಗ ಈ ಘಟನೆ ನಡೆದಿದ್ದು, ಸ್ಥಳಕ್ಕೆ ತಲಘಟ್ಟಪುರ ಪೊಲೀಸರು, ಅಗ್ನಿ ಶಾಮಕ ಸಿಬ್ಬಂಧಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಆದ್ರೂ, ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ ಒಂದುವರೆ ಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಇದರಿಂದ ನೈಸ್ ರಸ್ತೆಯಲ್ಲಿ ಕನಿಷ್ಠ ನಾಲ್ಕು ಕಿಲೋ ಮೀಟರ್​​​​ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಹಬ್ಬಕ್ಕೆಂದು ವಾಹನ ಸವಾರರು ಪರದಾಡುವಂತಾಗಿದೆ.

ಬೆಂಗಳೂರು (ಅಕ್ಟೋಬರ್.18): ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭಾರೀ ಅವಘಡ ಸಂಭವಿಸಿದೆ. ಕನಕಪುರ ರಸ್ತೆಯಲ್ಲಿ ಕೆಮಿಕಲ್ ತುಂಬಿದ್ದ​​ ಟ್ಯಾಂಕರ್ ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಚಿಮ್ಮಿದೆ. ಕನಕಪುರ ರಸ್ತೆ ಟೋಲ್​ನಿಂದ ಅಂಜನಾಪುರ ಕಡೆಗೆ ಬರುವಾಗ ಈ ಘಟನೆ ನಡೆದಿದ್ದು, ಸ್ಥಳಕ್ಕೆ ತಲಘಟ್ಟಪುರ ಪೊಲೀಸರು, ಅಗ್ನಿ ಶಾಮಕ ಸಿಬ್ಬಂಧಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಆದ್ರೂ, ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ ಒಂದುವರೆ ಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಇದರಿಂದ ನೈಸ್ ರಸ್ತೆಯಲ್ಲಿ ಕನಿಷ್ಠ ನಾಲ್ಕು ಕಿಲೋ ಮೀಟರ್​​​​ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಹಬ್ಬಕ್ಕೆಂದು ವಾಹನ ಸವಾರರು ಪರದಾಡುವಂತಾಗಿದೆ.

ಟ್ರಾಫಿಕ್ ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಪೊಲೀಸರು, ರಸ್ತೆಯಲ್ಲಿ ಬರ್ತಿದ್ದ ಎಂ ಸ್ಯಾಂಡ್ ಲಾರಿಗೆ ಐವತ್ತು ಸಾವಿರ ಹಣ ನೀಡಿ ಸ್ಯಾಂಡ್​​ ಅನ್ನು ಚರಂಡಿಗೆ ಸುರಿಸಿದ್ದಾರೆ. ಈ ಮೂಲಕ ಬದಲಿ ಮಾರ್ಗ ಸೃಷ್ಟಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 18, 2026 03:21 PM

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More