ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್: ನೈಸ್ ರಸ್ತೆಯಲ್ಲಿ ಕನಿಷ್ಠ ನಾಲ್ಕು ಕಿಲೋಮೀಟರ್ ಟ್ರಾಫಿಕ್ ಜಾಮ್
ಮುಖ್ಯಾಂಶಗಳು
- ಬೆಂಗಳೂರಿನ ನೈಸ್ ರಸ್ತೆಯಲ್ಲಿ ಹೊತ್ತಿ ಉರಿಯುತ್ತಿರುವ ಕೆಮಿಕಲ್ ಟ್ಯಾಂಕರ್
- ಕನಕಪುರ ರಸ್ತೆ ಟೋಲ್ನಿಂದ ಅಂಜಾನಪುರ ಕಡೆ ಬರ್ತಿದ್ದ ಟ್ಯಾಂಕರ್
- ಕನಕಪುರ ರಸ್ತೆಯ ಟೋಲ್ ಬಳಿ ಕನಿಷ್ಠ 4 ಕಿಲೋ ಮೀಟರ್ವರೆಗೆ ಟ್ರಾಫಿಕ್
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭಾರೀ ಅವಘಡ ಸಂಭವಿಸಿದೆ. ಕನಕಪುರ ರಸ್ತೆಯಲ್ಲಿ ಡೀಸೆಲ್ ಟ್ಯಾಂಕರ್ ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಚಿಮ್ಮಿದೆ. ಕನಕಪುರ ರಸ್ತೆ ಟೋಲ್ನಿಂದ ಅಂಜನಾಪುರ ಕಡೆಗೆ ಬರುವಾಗ ಈ ಘಟನೆ ನಡೆದಿದ್ದು, ಸ್ಥಳಕ್ಕೆ ತಲಘಟ್ಟಪುರ ಪೊಲೀಸರು, ಅಗ್ನಿ ಶಾಮಕ ಸಿಬ್ಬಂಧಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಆದ್ರೂ, ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ ಒಂದುವರೆ ಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಇದರಿಂದ ನೈಸ್ ರಸ್ತೆಯಲ್ಲಿ ಕನಿಷ್ಠ ನಾಲ್ಕು ಕಿಲೋ ಮೀಟರ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಹಬ್ಬಕ್ಕೆಂದು ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರು (ಅಕ್ಟೋಬರ್.18): ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭಾರೀ ಅವಘಡ ಸಂಭವಿಸಿದೆ. ಕನಕಪುರ ರಸ್ತೆಯಲ್ಲಿ ಕೆಮಿಕಲ್ ತುಂಬಿದ್ದ ಟ್ಯಾಂಕರ್ ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಚಿಮ್ಮಿದೆ. ಕನಕಪುರ ರಸ್ತೆ ಟೋಲ್ನಿಂದ ಅಂಜನಾಪುರ ಕಡೆಗೆ ಬರುವಾಗ ಈ ಘಟನೆ ನಡೆದಿದ್ದು, ಸ್ಥಳಕ್ಕೆ ತಲಘಟ್ಟಪುರ ಪೊಲೀಸರು, ಅಗ್ನಿ ಶಾಮಕ ಸಿಬ್ಬಂಧಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಆದ್ರೂ, ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ ಒಂದುವರೆ ಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಇದರಿಂದ ನೈಸ್ ರಸ್ತೆಯಲ್ಲಿ ಕನಿಷ್ಠ ನಾಲ್ಕು ಕಿಲೋ ಮೀಟರ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಹಬ್ಬಕ್ಕೆಂದು ವಾಹನ ಸವಾರರು ಪರದಾಡುವಂತಾಗಿದೆ.
ಟ್ರಾಫಿಕ್ ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಪೊಲೀಸರು, ರಸ್ತೆಯಲ್ಲಿ ಬರ್ತಿದ್ದ ಎಂ ಸ್ಯಾಂಡ್ ಲಾರಿಗೆ ಐವತ್ತು ಸಾವಿರ ಹಣ ನೀಡಿ ಸ್ಯಾಂಡ್ ಅನ್ನು ಚರಂಡಿಗೆ ಸುರಿಸಿದ್ದಾರೆ. ಈ ಮೂಲಕ ಬದಲಿ ಮಾರ್ಗ ಸೃಷ್ಟಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ.
