ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್

Updated on: May 14, 2025 | 9:21 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಸುತ್ತಮುತ್ತ ಭಾರೀ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊಂಡು ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಇಂದು(ಮೇ 14) ರಾತ್ರಿ ಸತತ ಅರ್ಧ ಗಂಟೆಯಿಂದ ಮಳೆ ಸುರಿಯುತ್ತಿದ್ದು, ಒಂದು ಅಡಿ ನೀರು ರಸ್ತೆ ಮೇಲೆ ನಿಂತಿದೆ. ಇದರಿಂದ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ.

ನೆಲಮಂಗಲ (ಮೇ 14): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಸುತ್ತಮುತ್ತ ಭಾರೀ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊಂಡು ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಇಂದು(ಮೇ 14) ರಾತ್ರಿ ಸತತ ಅರ್ಧ ಗಂಟೆಯಿಂದ ಮಳೆ ಸುರಿಯುತ್ತಿದ್ದು, ಒಂದು ಅಡಿ ನೀರು ರಸ್ತೆ ಮೇಲೆ ನಿಂತಿದೆ. ಇದರಿಂದ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ಇನ್ನು ಅರಿಶಿನಕುಂಟೆ ಬೈಪಾಸ್ ಗೆ ಮಳೆ ನೀರು ನುಗ್ಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಇನ್ನು ಮಳೆ ನೀರು ಹೊಕ್ಕು ಕಾರು, ಬೈಕ್, ಆಟೋ ಗಳು ಕೆಟ್ಟು ನಿಂತಿದ್ದು, ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More