Janardhana Reddy: ಪುತ್ರ ಕಿರೀಟಿ ಸಿನಿಮಾ ಬಗ್ಗೆ ಅಪ್ಡೇಟ್ ನೀಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ
Kireeti Reddy | Junior Movie: ಕಿರೀಟಿ ರೆಡ್ಡಿ ನಟನೆಯ ‘ಜೂನಿಯರ್’ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿವೆ. ಪುತ್ರನ ಸಿನಿಮಾ ಬಗ್ಗೆ ಜನಾರ್ದನ ರೆಡ್ಡಿ ಮಾತನಾಡಿದ್ದಾರೆ.
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ರೆಡ್ಡಿ (Kireeti Reddy) ಅವರು ರಾಜಕೀಯದ ಬದಲು ಸಿನಿಮಾ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಅವರು ನಟಿಸುತ್ತಿರುವ ಚೊಚ್ಚಲ ಚಿತ್ರಕ್ಕೆ ‘ಜೂನಿಯರ್’ (Junior Movie) ಎಂದು ಶೀರ್ಷಿಕೆ ಇಡಲಾಗಿದೆ. ಬಹುಭಾಷೆಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾದ ಕೆಲಸಗಳು ಹೇಗೆ ಸಾಗುತ್ತಿವೆ ಎಂಬುದರ ಬಗ್ಗೆ ಜನಾರ್ದನ ರೆಡ್ಡಿ (G Janardhana Reddy) ಮಾಹಿತಿ ಹಂಚಿಕೊಂಡಿದ್ದಾರೆ. ‘ಶೇಕಡ 80 ಭಾಗ ಶೂಟಿಂಗ್ ಆಗಿದೆ. ಮೈಸೂರು ಮತ್ತು ಬೆಂಗಳೂರಿನಲ್ಲಿ ಇನ್ನುಳಿದ ಚಿತ್ರೀಕರಣ ಮಾಡಲಾಗುವುದು. ಮಗ ಚಿತ್ರರಂಗದಲ್ಲಿಯೇ ಮುಂದುವರಿಯುತ್ತಾನೆ’ ಎಂದು ಅವರು ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 19, 2022 05:28 PM
Latest Videos